KARNATAKA NEWS/ ONLINE / Malenadu today/ Jul 29, 2023 SHIVAMOGGA NEWS
ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಾರ್ಗಲ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಇಲ್ಲಿನ ಬ್ರಾಹ್ಮಣ ಕೆಪ್ಪಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಅಂಬಿಕಾ ಎಂಬ ಮಹಿಳೆಯ ಶವ ತೋಟದ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಅನುಮಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸ್ತಿದ್ಧಾರೆ.
ಗ್ಯಾಸ್ ರಿಫಿಲ್ಲಿಂಗ್ ದಂಧೆ ಮೇಲೆ ಪೊಲೀಸ್ ಕಣ್ಣು!
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವೀರಾಪುರದಲ್ಲಿ ಒಮಿನಿ ವಾಹನಕ್ಕೆ ಗೃಹಬಳಕೆ ಸಿಲಿಂಡರ್ನಿಂದ ಗ್ಯಾಸ್ ತುಂಬುತ್ತಿದ್ದ ವೇಳೆ ಭದ್ರಾವತಿ ಗ್ರಾಮಾಂತರ ಪೊಲೀಸರು (Bhadravati Rural Police) ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಒಮಿನಿ ವಾಹನ ಸೇರಿದಂತೆ ಗ್ಯಾಸ್ ತುಂಬಿಸುವ ಸಲಕರಣೆಎಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಸೀದಿ ಮುಂದೆ ಬಾರ್ ಆ್ಯಂಡ್ ರೆಸ್ಟೋರೆಂಟ್ಗೆ ವಿರೋಧ
ರಿಪ್ಪನ್‌ಪೇಟೆಯಲ್ಲಿ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ತುಸು ದೂರದಲ್ಲಿ ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸ್ತಿರುವುದಕ್ಕೆ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಅಲ್ಲದೆ ನಿಯೋಜಿತ ಅಂಗಡಿಯ ಕಟ್ಟಡದ ಮುಂಭಾಗದ ಲೋಕೋಪಯೋಗಿ ರಸ್ತೆಯ ಚರಂಡಿಯ ಮೇಲೆ ಕುಳಿತು ಮೌನಪ್ರತಿಭಟನೆ ನಡೆಸುತ್ತೇವೆ ನಮಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ರು.
ಇಸ್ಪೀಟ್ ಅಡ್ಡೆ ಮೇಲೆ ರೇಡ್
ಭದ್ರಾವತಿ ತಾಲ್ಲೂಕಿನ ನ್ಯೂಟೌನ್ ಠಾಣೆ ಪೊಲೀಸರು ಇಸ್ಪೀಟ್ ಅಡ್ಡೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಕ್ ಲೈನ್ ಸಾರ್ವಜನಿಕ ಸಮುದಾಯ ಭವನದ ಪಕ್ಕದಲ್ಲಿ 5-6 ಜನರ ಗುಂಪೊಂದು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ಬಂಧನ
ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನಲೆಯಲ್ಲಿ ಏರ್ಪಡಿಸಲಾಗಿದ್ದ ಔತಣ ಕೂಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂದ ಇಬ್ಬರನ್ನ ಬಂಧಿಸಲಾಗಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದ ಕುವೆಂಪು ನಗರ ಬಡಾವಣೆಯ ಹೋಟೆಲ್ ಒಂದರಲ್ಲಿ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ 8 ಜನ ಗ್ರಾಮಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆದಿತ್ತು.ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಮನೆಗೆ ಕನ್ನ 89 ಸಾವಿರ ರೂ ಮೌಲ್ಯದ ಚಿನ್ನ ಕಳವು
ಮನೆಯೊಂದರ ಬೀರುವಿನಲ್ಲಿದ್ದ ಚಿನ್ನಾಭರಣ, ನಗದು ಕಳವು ಮಾಡಿರುವ ಭದ್ರಾವತಿ ತಾಲ್ಲೂಕಿನ ಶ್ರೀರಾಮನಗರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಮಂಜುಳಾರವರ ಮನೆಯಲ್ಲಿ ಲಾಕರ್‌ನಲ್ಲಿ ಇಡಲಾಗಿದ್ದ ಸುಮಾರು89000 ರು. ಮೌಲ್ಯದ ಆಭರಣ ಹಾಗು 8000 ರು. ನಗದು ಕಳುವಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
SHIVAMOGGA AIRPORT / ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್!
ರೈಲ್ವೆ ಪ್ರಯಾಣಿಕರಿಗೆ ಸೂಚನೆ! ಜನಶತಾಬ್ದಿ ಸೇರಿ ಹಲವು ಟ್ರೈನ್ಗಳ ಸಂಚಾರದಲ್ಲಿ ವ್ಯತ್ಯಯ! ವಿವರ ಇಲ್ಲಿದೆ