ಕ್ರಿಕೆಟ್ ವಿಚಾರಕ್ಕೆ ರಾಗಿಗುಡ್ಡದಲ್ಲಿ ಬೇರೆ ಬೇರೆ ಕೋಮಿನ ಹುಡುಗರ ನಡುವೆ ಹೊಡೆದಾಟ!

KARNATAKA NEWS/ ONLINE / Malenadu today/ May 1, 2023 GOOGLE NEWS


ಶಿವಮೊಗ್ಗ/  ಇಲ್ಲಿನ ರಾಗಿಗುಡ್ಡದ ಶಾಂತಿನಗರದಲ್ಲಿ ಕ್ರಿಕೆಟ್ ಆಡುವಾಗ ಹೊಡೆದಾಟ ನಡೆದಿದೆ. ಘಟನೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಿದೆ. ಅನ್ಯಕೋಮಿನ ಹುಡುಗರು ಹೊಡೆದಾಡಿಕೊಂಡಿದ್ದು ಹಲವರು  ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ನಡೆದಿದ್ದೇನು?    

ಕ್ರಿಕೆಟ್ ಆಡುವ ವೇಳೆ, ಎರಡು ಬೇರೆ ಬೇರೆ ಕೋಮಿನ ಹುಡುಗರ ನಡುವೆ ಹೊಡೆದಾಟ ನಡೆದಿದೆ. ಹೊಡೆದಾಟದ ಕಾರಣ ಸ್ಪಷ್ಟವಾಗಿಲ್ಲ. ಕೆಲವರು ಕೋಮು ನಿಂದನೆ ಎಂದರೆ ಮತ್ತೆ ಕೆಲವರು ಆಡವಾಡುವ ವಿಚಾರಕ್ಕೆ ಜಗಳ ನಡೆದಿದೆ ಎನ್ನುತ್ತಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿದೆ. 

ಇದನ್ನ ಓದಿ/ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಭಾರೀ ಶಿಕ್ಷೆ 

ಪಿಚ್​ನಲ್ಲಿ ಆಡವಾಡುವ ವಿಚಾರಕ್ಕೆ ಹೊಡೆದಾಟ ನಡೆದಿರುವ ಸಾಧ್ಯತೆಗಳಿದ್ದು, ಈ ಸಂಬಂಧ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಇನ್ನೂ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಪ್ರಾಥಮಿಕವಾಗಿ ತಿಳಿದುಬಂದಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇದನ್ನೂ ಓದಿ / ಒಂದೇ ದಿನ 90 ಲಕ್ಷದ ಎಣ್ಣೆ ಜಪ್ತಿ/ ಶಿಕಾರಿಪುರದಲ್ಲಿ ಭರ್ಜರಿ ಹಣ ಪತ್ತೆ/  ಒಂದೇ ರಾತ್ರಿ 19 ಪಿಟ್ಟಿಕೇಸ್/ ಎ.ಎ. ಸರ್ಕಲ್​ ನಲ್ಲಿ ರೂಟ್ ಮಾರ್ಚ್​! ಪೊಲೀಸ್ ನ್ಯೂಸ್​ 

 

ಗಾಯಗೊಂಡವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಸೇರಿದಂತೆ ಬಿಜೆಪಿ ಮುಖಂಡರು ಭೇಟಿಯಾಗಿ, ನಡೆದ ಘಟನೆ ಬಗ್ಗೆ ವಿಚಾರಿಸಿದ್ದಾರೆ. 

 

Malenadutoday.com Social media

Leave a Comment