ಮಂಗಳೂರಿಗೆ ಹೋಗುತ್ತಿದ್ದ ಲಾರಿಗೆ ಹೊಸನಗರದಲ್ಲಿ ಬೆಂಕಿ!

ಹಂಚಿಕೊಳ್ಳಿ
WhatsApp Facebook X Telegram
A lorry transporting maize caught fire
A lorry transporting maize caught fire

maize caught fire / ಮಲೆನಾಡು ಟುಡೆ ಸುದ್ದಿ / ಹೊಸನಗರ/ ಮೆಕ್ಕೆಜೋಳ ತುಂಬಿದ್ದ ಲಾರಿಯೊಂದು ಇಲ್ಲಿನ ಬೇಳೂರುಗ್ರಾಮದ ಬಳಿಯಲ್ಲಿ ಸುಟ್ಟು ಕರಕಲಾಗಿದೆ. ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಇದ್ದಾಗಿತ್ತು.

ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದ ಬಳಿ ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿಯ ಮುಂಭಾಗ ಸಂಪೂರ್ಣ ಸುಟ್ಟು ಹೋಗಿದೆ.

ಇನ್ನೂ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ವಾಹನ ಚಾಲಕ ಮಹಮ್ಮದ್ ಹುಸೇನ್ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸಿ ಕೆಳಗಿಳಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೊಂದೆಡೆ ಘಟನೆಯ ಮಾಹಿತಿ ತಿಳಿದ ಸ್ಥಳೀಯರು ನೆರವಿಗೆ ಧಾವಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor