KARNATAKA NEWS/ ONLINE / Malenadu today/ Jun 10, 2023 SHIVAMOGGA NEWS
ಶಿವಮೊಗ್ಗ/ ನಗರದ ಸೀಗೇಹಟ್ಟಿಯಲ್ಲಿ ನಡೆದ ಅನ್ಯಕೋಮಿನ ಹುಡುಗರ ನಡುವಿನ ಗಲಾಟೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ಎಫ್ಐಆರ್ ಆಗಿದೆ. ಸುಮೋಟೊ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಓರ್ವ ಹಿಂದು ಹಾಗೂ ಹೆಸರು ದಾಖಲಿಸದ ಮುಸ್ಲಿಮ್ ಹುಡುಗರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ನಡೆದಿದ್ದೇನು?
ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ದಾಖಲಾಗಿರುವ ಎಫ್ಐಆರ್ನ ಪ್ರಕಾರ, ಈ ಘಟನೆ ಕಳೆದ ಜೂನ್ ಆರರಂದು ನಡೆದಿದೆ. ಪೊಲೀಸರು ಗಸ್ತಿನಲ್ಲಿದ್ದ ವೇಳೆ ಸೀಗೇಹಟ್ಟಿ ಸರ್ಕಲ್ ಬಳಿ ಇರುವ ಮೌಂಟೇನ್ ಸ್ಕೂಲ್ ಹತ್ತಿರ ಎರಡು ಗುಂಪುಗಳು ಪರಸ್ಪರ ಕೈ ಕೈ ಮಿಲಾಯಿಸ್ತಿರುವುದು ಕಂಡು ಬಂದಿದೆ. ರಸ್ತೆಯಲ್ಲಿ ಪರಸ್ಪರ ಬೈಕ್ ತಾಗಿದ ಕಾರಣಕ್ಕೆ ಯುವಕರ ಗುಂಪಿನ ನಡುವೆ ಕಿತ್ತಾಟ ಆರಂಭವಾಗಿದೆ. ಇದನ್ನ ಗಮನಿಸಿದ ಪೊಲೀಸರು ಸ್ಥಳಕ್ಕೆ ಹೋಗುತ್ತಲೇ ಸ್ತಳದಿಂದ ಯುವಕರ ಗುಂಪು ಓಡಿ ಹೋಗಿದೆ. ಇನ್ನೂ ಈ ಸಂಬಂಧ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ತರುವ ಪ್ರಯತ್ನದ ಆರೋಪದ ಅಡಿಯಲ್ಲಿ IPC 1860 (U/s-160) ನಡಿಯಲ್ಲಿ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ ದಾಖಲಾಗಿದೆ.
ಸಾರ್ವಜನಿಕರಿಗೆ ಸೂಚನೆ ! ಶಿವಮೊಗ್ಗದ ಬಹುತೇಕ ಭಾಗಗಳಲ್ಲಿ 2 ದಿನ ವಿದ್ಯುತ್ ಪೂರೈಕೆ ಸ್ಥಗಿತ? ಪೂರ್ಣ ಮಾಹಿತಿ ಇಲ್ಲಿದೆ ಓದಿ
ಶಿವಮೊಗ್ಗ ಮೆಸ್ಕಾಂ ವಿಭಾಗ ತನ್ನ ಪ್ರಕಟಣೆಯಲ್ಲಿ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಎರಡು ದಿನ ಬಹುತೇಕ ಕಡೆಗಳಲ್ಲಿ ವಿದ್ಯುತ್ ವತ್ಯಯ ಆಗಲಿದೆ ಎಂದು ತಿಳಿಸಿದೆ. ಈ ಸಂಬಂಧ ಸಾಲು ಸಾಲು ಪ್ರಕಟಣೆಗಳನ್ನ ಮೆಸ್ಕಾಂ ಹೊರಡಿಸಿದ್ದು, ಅದರ ವಿವರ ಇಲ್ಲಿದೆ ಓದಿ
ಜೂ. 11 ರಂದು ವಿದ್ಯುತ್ ವ್ಯತ್ಯಯ
ನಗರ ಉಪ ವಿಭಾಗ-2ರ ಘಟಕ-2,5,6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಹಾಗೂ ಸ್ಮಾರ್ಟ್‍ಸಿಟಿ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಜೂನ್ 11 ರ ಬೆಳಿಗ್ಗೆ 9:00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ?
ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಎಚ್‍ಬಿ ಕಾಲೂನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಎಚ್ ರಸ್ತೆ, ಒ.ಟಿ ರಸ್ತೆ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ,
ಊರುಗಡೂರು, ಸುಳೇಬೈಲು ಮತ್ತು ಸುತ್ತ ಮುತ್ತಲಿನ ಪ್ರದೇಶ, ಜೆ.ಸಿ ನಗರ, ಬಿ.ಹೆಚ್ ರಸ್ತೆ, ಬುದ್ಧ ನಗರ, ಅಮೀದ್ ಅಹಮದ್ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್,
ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ,ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್,ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್ ಕೇರಿ, ಇಲಿಯಾಸ್ ನಗರ 1ನೇ ಕ್ರಾಸ್‍ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯಾ ಶಾದಿಮಹಲ್, ಇಲಿಯಾಸ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್,
ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎಫ್-05-ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08-ರಾಮೇನಕೊಪ್ಪ ಗ್ರಾಮಾಂತರ ಪ್ರದೇಶ. ಎಫ್-18-ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ,
ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಜೂ.11 ರಂದು ವಿದ್ಯುತ್ ವ್ಯತ್ಯಯ
ಇನ್ನೂ ಜೂನ್ 11 ರಂದು ಶಿವಮೊಗ್ಗ ತಾಲ್ಲೂಕು, ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.11 ರ ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ?
ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಜೂ.11 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ ಹಾಗೂ ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜೂ.11 ರ ಬೆಳಿಗ್ಗೆ 09:00 ರಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೊನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಜೂ.13 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-5 ರಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಜೂ.13 ರ ಬೆಳಗ್ಗೆ 09:00 ರಿಂದ ಸಂಜೆ 05:00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ?
ಗೋಪಾಲಗೌಡ ಬಡಾವಣೆ, ಎ,ಬಿ,ಸಿ,ಡಿ,ಇ,ಎಫ್ ಬ್ಲಾಕ್, ಕೆ.ಹೆಚ್.ಬಿ, ಎಲ್.ಐ.ಜಿ, ಎಂ.ಐ.ಜಿ, ಪ್ರೆಸ್ ಕಾಲೋನಿ, ನೀಲಮೇಘಮ್ ಲೇಔಟ್, ಅಲ್‍ಹರೀಮ್ ಲೇಔಟ್, ಪೊಲೀಸ್ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ವಿದ್ಯುತ್ ಜನ ಸಂಪರ್ಕ ಸಭೆ
ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜೂನ್ 12 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ
ಶಿವಮೊಗ್ಗ / ನಗರ ನಾಗರಿಕರಿಗೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಲಿದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಕಟಣೆಯಲ್ಲಿ ಏನಿದೆ?
ಶಿವಮೊಗ್ಗ ನಗರದಲ್ಲಿ ಇದೇ ಜೂನ್ 11 ಮತ್ತು 12ರಂದು ಕುಡಿಯುವ ನೀರು (Drinking Water) ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣವೇನು?
ಜೂ.11ರಂದು ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ ವಿತರಣಾ ಕೇಂದ್ರದ ದುರಸ್ಥಿ ಕಾರ್ಯ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ, ನೀರು ಸರಬರಾಜು ಕೇಂದ್ರಕ್ಕೆ ವಿದ್ಯುತ್ ಪೂರೈಕೆ ಆಗುವುದಿಲ್ಲ. ಆದ್ದರಿಂದ ಜೂನ್ 11 ಮತ್ತು 12ರಂದು ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಲಿದೆ ಎನ್ನಲಾಗಿದೆ
