ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಯ ಸಮೀಪ ನಿನ್ನೆ ಸಂಜೆ ಅಪಘಾತ ಸಂಭವಿಸಿದೆ. ಕಾರೊಂದು ನಿಯಂತ್ರಣ ತಪ್ಪಿ, ಅಲ್ಲಿದ್ದ ಬೈಕ್ ಮತ್ತು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗದ ಕಡೆಯಿಂದ ಬಂದ ವ್ಯಾಗನರ್ ಕಾರು, ಚಾಲಕನ ನಿಯಂತ್ರಣ ತಪ್ಪಿ, ಅಲ್ಲಿದ್ದ ಬೈಕ್ಗೆ ಹಾಗೂ ನಡೆದುಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸ್ತಳದಲ್ಲಿದ್ದವರು, ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ಧಾರೆ. ಅಪಘಾತಕ್ಕೆ ನಿಖರ ಕಾರಣ ಸ್ಪಷ್ಟವಾಗಿಲ್ಲ.ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com