KARNATAKA NEWS/ ONLINE / Malenadu today/ Jul 27, 2023 SHIVAMOGGA NEWS
ಸುರಿವ ಮಳೆಯ ನಡುವೆ ಮಳೆ ನೀರಲ್ಲಿಯೇ ತನ್ನ ದಾಹ ತೀರಿಸಿಕೊಂಡು ಹುಲಿರಾಯನ ವಿಡಿಯೋವೊಂದು ವೈರಲ್ ಆಗುತ್ತಿದೆ. ಚಾಮರಾಜನಗರ ಜಿಲ್ಲೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಂಡು ಬಂದ ದೃಶ್ಯದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಬಂಡೀಪುರದ ಹುಲಿಯೊಂದು ಸಫಾರಿವಲಯದ ರಸ್ತೆಯಲ್ಲಿ ನೀರು ಕುಡಿಯುತ್ತಿರುವ ದೃಶ್ಯವನ್ನು ಅಲ್ಲಿಗೆ ಸಫಾರಿಗೆ ಹೋಗಿದ್ದವರು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವೀಡಿಯೋ ಬಂಡೀಪುರ ಸಫಾರಿಯಲ್ಲಿ ತೆಗೆದಿದ್ದಾಗಿದೆ ಎಂದು ಅಲ್ಲಿನ ಅರಣ್ಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬಂಡೀಪುರದಲ್ಲಿ ಕಾಡು ಹಾದಿಯಲ್ಲಿ ಕಾಣ ಸಿಕ್ಕ ಹುಲಿರಾಯ! #ViralVideos pic.twitter.com/7o1nKARcIp
— malenadutoday.com (@CMalenadutoday) July 27, 2023
ಶರಾವತಿ ಸಂತ್ರಸ್ತರ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ! ಜಿಲ್ಲಾಡಳಿತಕ್ಕೆ ಆರು ಮಹತ್ವದ ಸೂಚನೆ !
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓ ಅವರೊಂದಿಗೆ ಪ್ರಸಕ್ತ ಸಾಲಿನ ಹವಾಮಾನ ಮತ್ತು ಮಳೆ-ಬೆಳೆಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಶಿವಮೊಗ್ಗ ಜಿಲ್ಲೆ ಜಿಲ್ಲಾಧಿಕಾ ಡಾ.ಸೆಲ್ವಮಣಿ ಆರ್ (Dr. SelvamaniR) ಜಿಲ್ಲೆಯಲ್ಲಿ ಅಪಾಯ ಮಟ್ಟದಲ್ಲಿ ನದಿ, ಜಲಾಶಯದ ಹರಿವು ಇರುವುದಿಲ್ಲ. ಒಳಹರಿವಿನಷ್ಟೇ ಹೊರ ಹರಿವು ಇದೆ. ಲಿಂಗನಮಕ್ಕಿ ಜಲಾಶಯದಲ್ಲಿ 1778.9 ಅಡಿ ನೀರು ಭರ್ತಿಯಾಗಿದೆ. ಭದ್ರಾ ಜಲಾಶಯದಲ್ಲಿ 152.9 ಅಡಿ ನೀರು ಇದೆ. ಮನೆ ಹಾನಿ ಮತ್ತು ಜಾನುವಾರು ಹಾನಿಗೆ ಸಂಬಂಧಿದಂತೆ ಪರಿಹಾರ ನೀಡಲಾಗಿದೆ. ಹಾಗೂ ಮಳೆ ಹಾನಿ/ಅವಘಡಗಳ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇತ್ತೀಚೆಗೆ ತುಂಗಾ ನದಿಯಲ್ಲಿ ಈಜುತ್ತಿದ್ದ ವ್ಯಕ್ತಿಯನ್ನು ಹಿಡಿದು ಸೂಕ್ತ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಶರಾವತಿ ಹಿನ್ನೀರು ಸಂತ್ರಸ್ತರ ಬಗ್ಗೆ ಮಾಹಿತಿ ಕೇಳಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯರವರು ಶರಾವತಿ ಹಿನ್ನೀರು ಸಂತ್ರಸ್ತರ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಈ ಕುರಿತು ತಾವು ಕಂದಾಯ, ನೀರಾವರಿ, ಅರಣ್ಯ ಇತರೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಸೂಚನೆ
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ ಸಿದ್ದರಾಮಯ್ಯ ಮಳೆ ಹೆಚ್ಚಾದಾಗ ಮತ್ತು ಪ್ರವಾಹ ಸಂದರ್ಭದಲ್ಲಿ ಜೀವಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಮುಂಚಿತವಾಗಿ ಎಲ್ಲ ರೀತಿಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕು.
ಅಪಾಯದ ಮಟ್ಟ ಮೀರಿ ಹರಿಯುವ ನದಿಗಳು ಮತ್ತು ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು.
ಪ್ರತಿ ಜಿಲ್ಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ವಾರ್ ರೂಂ ತೆರೆಯಬೇಕು. ಕಂದಾಯ, ಗ್ರಾಮೀಣಾಭಿವೃದ್ದಿ, ಪೊಲೀಸ್, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು.
ಪದೇ ಪದೇ ಮಳೆ ಹಾನಿಗೊಳಗಾಗುವ ಪ್ರಕರಣಗಳಿಗೆ ಸಂಬಂಧಿಸಿಂದತೆ ಪುನರ್ವಸತಿಗೆ ಹೆಚ್ಚಿನ ಒತ್ತು ನೀಡಬೇಕು.
ರೈತರ ಆತ್ಮಹತ್ಯೆಗೆ ಕಾರಣವಾಗುವ ಅಂಶಗಳಾದ ಬಲವಂತದ ಸಾಲ ವಸೂಲಾತಿ ಇತರೆ ಅಂಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದರು.
ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳು ಸೋರುತ್ತಿದ್ದರೆ ಅಥವಾ ಇತರೆ ಸಮಸ್ಯೆ ಇದ್ದರೆ ಪರಿಶೀಲಿಸಿ ಅಗತ್ಯವಿರುವ ರಿಪೇರಿಯನ್ನು ಕೂಡಲೇ ಮಾಡಿಸಬೇಕು.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಮಾತನಾಡಿ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕೆಂದರು.
ಕಂದಾಯ ಸಚಿವರಾದ ಕೃಷ್ಣಭೈರೇಗೌಡರವರು ಮಾತನಾಡಿ ಮಳೆ ಕೊರತೆ ಇರುವೆಡೆ ಪರ್ಯಾಯ ಬೆಳೆ ಬೆಳೆಯಲು ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ಇತ್ಯಾದಿ ದಾಸ್ತಾನಿಗೆ ಕ್ರಮ ವಹಿಸಬೇಕೆಂದರ
ಲಾಸ್ಟ್ ಡೇಟ್ ವದಂತಿ! ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ ಫುಲ್ ರಶ್! ಏನಿದು?
ಮನೆಯ ಮೇಲೆಯೇ ಕುಸಿದ ಧರೆ! ಆಸರೆ ಕಳೆದುಕೊಂಡ ಕುಟುಂಬಕ್ಕೆ ಅಂಗನವಾಡಿಯ ಆಶ್ರಯ
.
