aa circle shivamogga : july 11 : ಅಮೀರ್ ಅಹಮದ್ ಸರ್ಕಲ್‌ನಲ್ಲಿ ಲಾರಿ ಡಿಕ್ಕಿ: ಪೊಲೀಸ್ ಚೌಕಿ ಜಖಂ
ಶಿವಮೊಗ್ಗ: ನಗರದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಕಳೆದ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿದ್ದ ಪೊಲೀಸ್ ಚೌಕಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಲಾರಿ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಚೌಕಿ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆ ಸಂಭವಿಸಿದ ಸಮಯದಲ್ಲಿ ಚೌಕಿಯೊಳಗೆ ಯಾವುದೇ ಪೊಲೀಸರು ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.
