ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14 2025, ತೀರ್ಥಹಳ್ಳಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಸ್ಥೆಯ (ಟಿಎಪಿಸಿಎಂಎಸ್) ಆಡಳಿತ ಮಂಡಳಿಗೆ ಸಹಕಾರ ಭಾರತಿ ಸಂಘಟನೆಯ ನೇತೃತ್ವ ಒಟ್ಟು 11 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ ಶಾಸಕ ಆರಗ ಜ್ಞಾನೇಂದ್ರರವರ ಪುತ್ರ ಅಭಿನಂದನ್ ಸಹ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಚರ್ಚೆಗೆ ಬಂದ ಬೆನ್ನಲ್ಲೆ ಶಾಸಕ ಆರಗ ಜ್ಞಾನೇಂದ್ರ , ಸಹಕಾರ ಸಂಸ್ಥೆಯ ನಿರ್ದೇಶಕರ ಆಯ್ಕೆಯಲ್ಲಿ ಯಾವುದೇ ನಿರ್ದಿಷ್ಟ ಜಾತಿಗೆ ಅನ್ಯಾಯವಾಗದಂತೆ ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಅವರು ಸ್ಪಷ್ಟಪಡಿಸಿದರು.
ಬಿಜೆಪಿ ಪಕ್ಷದಲ್ಲಿ ಈ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ಭಿನ್ನಾಭಿಪ್ರಾಯಗಳು ಇರುವುದಿಲ್ಲ. ಆಕಾಂಕ್ಷಿಗಳು ಹೆಚ್ಚು ಸಂಖ್ಯೆಯಲ್ಲಿ ಇದ್ದುದರಿಂದ ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಾಗಿಲ್ಲಎಂದಿದ್ದಾರೆ. ಅಲ್ಲದೆ ತಮ್ಮ ಪುತ್ರ ಅಭಿನಂದನ್ ಅವರು ಸಹಕಾರ ಕ್ಷೇತ್ರದ ಮೂಲಕ ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿರುವುದಕ್ಕೆ ಬೇರೆ ರೀತಿಯ ಅರ್ಥಗಳನ್ನು ಕಲ್ಪಿಸುವುದು ಸರಿಯಲ್ಲ. ಯಾವುದೇ ರೀತಿಯ ಅವಕಾಶಗಳು ಸಿಗಬೇಕಿದ್ದರೂ, ಸಂಘಟನೆಯೇ ಅಂತಿಮ ತೀರ್ಮಾನವನ್ನು ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದರು.

ಸಹಕಾರ ಭಾರತಿ ತಂಡದಿಂದ ನಾಗರಾಜ ಶೆಟ್ಟಿ ಶಿವಕುಮಾರ್, ಕಸ್ತೂರು ರಮೇಶ್, ಅಭಿನಂದನ್, ಕಡೇಮಕ್ಕಿ ದೇವರಾಜ್, ಕುಪ್ಪಳಿ ರಾಘವೇಂದ್ರ, ಕುಡುಮಲ್ಲಿಗೆ ಅಂಜೂರ, ಮಂಗಳಗೋಪಿ, ಹಾರೋಗೊಳಿಗೆ ವಾಸುದೇವ್, ಅಶ್ವಿನಿ ಮತ್ತು ಬಾಬಣ್ಣ ಅವರು ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಒಟ್ಟು 14 ಸದಸ್ಯರಲ್ಲಿ 11 ಮಂದಿ ಸಹಕಾರ ಭಾರತಿ ತಂಡಕ್ಕೆ ಸೇರಿದವರಾಗಿದ್ದಾರೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!‘

