ಶಿವಮೊಗ್ಗ | ಅನಾಮಧೇಯ ಗಂಡು ಮಗುವಿನ ಪೋಷಕರ ಪತ್ತೆಗಾಗಿ ಪ್ರಕಟಣೆ ನೀಡಲಾಗಿದ್ದು, ಪ್ರಕಟಣೆಯ ವಿವರ ಇಲ್ಲಿದೆ ಭದ್ರಾವತಿ ತಾಲ್ಲೂಕು, ಮಲ್ಲಾಪುರ ಗ್ರಾಮದ ಗೇಟ್ ಹತ್ತಿರ ರಸ್ತೆ ಬದಿಯಲ್ಲಿ ಅನಾಥ ಸ್ಥಿತಿಯಲ್ಲಿ ಮಗುವೊಂದು (Baby Boy) ಪತ್ತೆಯಾಗಿತ್ತು. ಈ ಮಗುವನ್ನು ಹೊಳೆಹೊನ್ನೂರು ಪೋಲೀಸ್ ಠಾಣೆಯ ಪೊಲೀಸರು ಸಾರ್ವಜನಿಕರ ಮಾಹಿತಿ ಮೇರೆಗೆ ರಕ್ಷಿಸಿ ದಿನಾಂಕ: 16.12.2025 ರಂದು ಪೋಷಕರ ಪತ್ತೆಗಾಗಿ ದೂರು ದಾಖಲಿಸಿದ್ದರು. ಇದೀಗ ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಛೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-295511 ಗೆ ಸಂಪರ್ಕಿಸುವಂತೆ ಪ್ರಕಟಣೆಯನ್ನು ನೀಡಲಾಗಿದೆ. ಸದ್ಯ ಮಗು ಮಕ್ಕಳ ಕಲ್ಯಾಣ ಸಮಿತಿ ಉಸ್ತುವಾರಿಯಲ್ಲಿದೆ.

ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
ಭದ್ರಾವತಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಶಿವಮೊಗ್ಗ ಬಾಲಮಂದಿರದ ಮನವಿ Abandoned Baby Boy Found in Bhadravathi: Search for Parents by Shimoga Balamandira
