Abbi Falls Hosanagara : ಅಬ್ಬಿ ಫಾಲ್ಸ್‌ನಲ್ಲಿ ದುರಂತ: ಫೋಟೋ ತೆಗೆಸಿಕೊಳ್ಳುವಾಗ ಯುವಕ ನೀರುಪಾಲು,
Abbi Falls Hosanagara : ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಖಾಸಗಿ ಕಂಪನಿಯ ಮ್ಯಾನೇಜರ್ ಒಬ್ಬರು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ. ಮೃತ ದುರ್ದೈವಿ ಬೆಂಗಳೂರಿನ ನಾಗರಬಾವಿಯ ರಮೇಶ್ (35) ಎಂದು ಗುರುತಿಸಲಾಗಿದೆ.
ರಮೇಶ್ ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಅಬ್ಬಿ ಫಾಲ್ಸ್ಗೆ ಬಂದಿದ್ದರು. ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಆಯತಪ್ಪಿ ನೀರಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ನೀರಿನ ಹರಿವು ಹೆಚ್ಚಿದ್ದ ಕಾರಣ ರಮೇಶ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಘಟನೆ ನಡೆದ ಕೂಡಲೇ ರಮೇಶ್ ಕೊಚ್ಚಿ ಹೋಗುತ್ತಿರುವ ವಿಡಿಯೋವನ್ನು ಅವರ ಸ್ನೇಹಿತರು ಸೆರೆಹಿಡಿದಿದ್ದಾರೆ. ಈ ದುರಂತದ ನಂತರ, ರಮೇಶ್ ಅವರ ಮೃತದೇಹವು ಫಾಲ್ಸ್‌ನ ಕೆಳಭಾಗದಲ್ಲಿ ಪತ್ತೆಯಾಗಿದ್ದು, ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


View this post on Instagram