ಟ್ಯಾಂಕ್ ಮೊಹಲ್ಲಾದಲ್ಲಿ ನಡೆದ ಘಟನೆ ಬಗ್ಗೆ ADGP ಆರ್​. ಹಿತೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’

ಶಿವಮೊಗ್ಗ ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಘಟನೆ ಸಂಬಂಧ ಎಡಿಜಿಪಿ ಆರ್ ಹಿತೇಂದ್ರ  ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗ ಬಂದೋಬಸ್ತ್​ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ  ನಡೆದ ಘಟನೆ ಮರುಕಳಿಸದಂತೆ ಕ್ರಮವಹಿಸಲಾಗುವುದು. 

ಹೆಚ್ಚಿನ ಭದ್ರತೆಯನ್ನು ಈ ಮೊದಲೇ ಕೈಗೊಳ್ಳಲಾಗಿತ್ತು. ಹೀಗಾಗಿ ಪರಿಸ್ಥಿತಿಯನ್ನು ಕಂಟ್ರೋಲ್​ಗೆ ತೆಗೆದುಕೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶವಾದ್ದರಿಂದ ಇನ್ನಷ್ಟು ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

 


ಇನ್ನಷ್ಟು ಸುದ್ದಿಗಳು 

 


 

Leave a Comment