ಶಿವಮೊಗ್ಗ: ವಿದ್ಯಾರ್ಥಿ ಸಂಕೇತ್ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ಹಂಚಿಕೊಳ್ಳಿ
WhatsApp Facebook X Telegram
ABVP Protest in Shivamogga
ABVP Protest in Shivamogga

ಶಿವಮೊಗ್ಗ :  ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ 16 ವರ್ಷದ ಶಾಲಾ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸಿದೆ. ಈ ಕೃತ್ಯವನ್ನು ಪ್ರತಿಭಟಿಸಿ ಇಂದು ನಗರದ ಎಂ.ಆರ್.ಎಸ್ ಸರ್ಕಲ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಜ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಬೇಕೇ ಬೇಕು ನ್ಯಾಯ ಬೇಕು ಹಾಗೂ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದರು. ನಂತರ ಪೊಲೀಸ್ ವರಿಷ್ಠಾಧಿಕಾರಿಗಳಿಗೆ  ವಿಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿತು.

ಶಿವಮೊಗ್ಗ: ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್, ಬಿತ್ತು ದಂಡ

ABVP Protest ಮನವಿ ಪತ್ರದಲ್ಲಿ ಏನಿದೆ

ಪೊಲೀಸ್ ಇಲಾಖೆಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ, ಕಳೆದ ಫೆಬ್ರವರಿ 24ರಂದು ಶಾಲಾ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಸಂಕೇತ್ ಎಂಬ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ವಿಚಾರ ಎಂದು ತಿಳಿಸಲಾಗಿದೆ. ಈ ಕೃತ್ಯ ಎಸಗಿದವರು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ್ದರೂ ಸಹ, ಪೊಲೀಸರು ಯಾವುದೇ ಹಸ್ತಕ್ಷೇಪಕ್ಕೆ ಒಳಗಾಗದೆ ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. 

ನಗರದಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮತ್ತು ಗಾಂಜಾ ಪದಾರ್ಥಗಳು ಅತಿ ಸುಲಭವಾಗಿ ಲಭ್ಯವಾಗುತ್ತಿರುವುದು ಇಂತಹ ಹಿಂಸಾತ್ಮಕ ಘಟನೆಗಳಿಗೆ ಪ್ರಮುಖ ಕಾರಣವಾಗಿದ್ದು, ಮಾದಕ ದ್ರವ್ಯಗಳ ವ್ಯಸನದಿಂದಾಗಿ ವಿದ್ಯಾರ್ಥಿಗಳು ಇಂತಹ ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ ಎಂದು ಸಂಘಟನೆ ಕಳವಳ ವ್ಯಕ್ತಪಡಿಸಿದೆ.

ರಾಜ್ಯದ ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆಯು ಡ್ರಗ್ಸ್ ಜಾಲವನ್ನು ಭೇದಿಸುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಪರಿಷತ್, ಈ ಮಾಫಿಯಾವನ್ನು ಮಟ್ಟಹಾಕುವುದನ್ನು ಪೊಲೀಸರು ಪ್ರಥಮ ಆದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದೆ. ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಕಟ್ಟೆಚ್ಚರ ವಹಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಪೂರಕ ವಾತಾವರಣವನ್ನು ಮರುಸ್ಥಾಪಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ತನಿಖೆ ಹಾಗೂ ಕಾರ್ಯಾಚರಣೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ABVP Protest in Shivamogga

ABVP Protest in Shivamogga
ABVP Protest in Shivamogga
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor