ಹೊಳೆಕೊಪ್ಪ ಸೇತುವೆ ಬಳಿ ಬಸ್-ಬೈಕ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ
ಸೊರಬ ತಾಲ್ಲೂಕಿನ ಹೊಳೆಕೊಪ್ಪ ಬಳಿಯ ಸೇತುವೆ ಸಮೀಪ ಸಾಗರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಹೊಲದ ಕೆಲಸಕ್ಕೆ ತೆರಳುತ್ತಿದ್ದಂತ ಸಾಗರದ ಲಿಂಗರಾಜು(42) ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಈ ಸಂದರ್ಭದಲ್ಲಿ ಸೊರಬಗೆ ತೆರಳುತ್ತಿದ್ದಂತಹ ಇಮ್ರಾನ್ ಮತ್ತು ಸ್ನೇಹಿತರು ತಮ್ಮ ಕಾರಿನಲ್ಲಿ ಕರೆದೊಯ್ದು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಥಳಕ್ಕೆ ಸೊರಬ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Bus Bike Accident
