ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ (anandapura) ಪೊಲೀಸ್ ಉಪ ಠಾಣೆ ಸಮೀಪವೇ ಇವತ್ತು ಆಕ್ಸಿಡೆಂಟ್ ಆಗಿದೆ. ಶಾಲೆ ವಿದ್ಯಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಸ್ಥಳೀಯ ಶಾಲೆಯೊಂದರಲ್ಲಿ ಓದುತ್ತಿದ್ದ ಮಕ್ಕಳು ಶಾಲೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ.
ಸಾಗರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕಾರು ಮಕ್ಕಳಿಗೆ ಎದುರುಗಡೆಯಿಂದಲೇ ಡಿಕ್ಕಿ ಹೊಡೆದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಟ್ರೀಟ್ಮೆಂಟ್ಗೆ ಮೆಗ್ಗಾನ್ ಆಸ್ಪತ್ರೆಗೆ(shivamogga meggan hospital) ಕಳುಹಿಸಿಕೊಡಲಾಗಿದೆ.
ಭದ್ರಾವತಿಯ ಲಾಡ್ಜ್ ನಲ್ಲಿ, ಹಾಸನ ಮೂಲದ ಓರ್ವನ ಕೊಲೆ/ ಪ್ರೇಯಸಿಯಿಂದಲೇ ನಡೆಯಿತೆ ಹತ್ಯೆ?
ಆನಂದಪುರ ಉಪಠಾಣೆಯ ಪೊಲೀಸರು ಕಾರನ್ನು ಸ್ಟೇಷನ್ಗೆ ತೆಗೆದುಕೊಂಡು ಹೋಗಿ ನಿಲ್ಲಿಸಿದ್ದು, ಘಟನೆ ಸಂಬಂಧ ವಿಚಾರಣೆ ನಡೆಸ್ತಿದ್ಧಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com