ಕಾರು ಹಾಗು ಟಿಪ್ಪರ್ ಲಾರಿಯ ನಡುವೆ ನಿನ್ನೆ ಅಂದರೆ ಏಪ್ರಿಲ್ 24 ರ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬೈರಾಪುರದಲ್ಲಿ ನಡೆದಿದೆ.
accident : ಹೇಗಾಯ್ತು ಘಟನೆ
ಶಿಕಾರಿಪುರದಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಲಾರಿ ಗೋವಾದಿಂದ ಹಿತ್ಲದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನ ಚಾಲಕ ಸಮೀವುಲ್ಲಾ ಹಾಗೂ ಮಹಿಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ನಾಲ್ಕು ಜನರಿಗೆ ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.