SHIVAMOGGA NEWS TODAY

ಸಾಗರ: ವಿನಾಯಕ ವೃತ್ತದಲ್ಲಿ ಲಾರಿ-ಕಾರು ಭೀಕರ ಡಿಕ್ಕಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Accident ಸಾಗರ: ನಗರದ ಪ್ರಮುಖ ಜಂಕ್ಷನ್ ಆದ ವಿನಾಯಕ ವೃತ್ತದಲ್ಲಿ ಗುರುವಾರ ಬೆಳಿಗ್ಗೆ ಲಾರಿ ಮತ್ತು ಕಾರಿನ ನಡುವೆ ಭೀಕರಅಪಘಾತ ಸಂಭವಿಸಿದೆ. 

ಶಿವಮೊಗ್ಗ : ಹೋಳಿ ಹಬ್ಬ & ಶೆಡ್​ ಕೇಸ್! 10 ಮಂದಿ ಅರೆಸ್ಟ್!

ಹೊಸನಗರ ರಸ್ತೆಯಿಂದ ಶಿವಮೊಗ್ಗದ ಕಡೆಗೆ ಹೆಚ್‌ಪಿ ಗ್ಯಾಸ್ ಸಿಲಿಂಡರ್‌ಗಳನ್ನು ಹೊತ್ತು ಸಾಗುತ್ತಿದ್ದ ಲಾರಿ ಹಾಗೂ ತೀರ್ಥಹಳ್ಳಿ ರಸ್ತೆಯಿಂದ ಸಾಗರ ರಸ್ತೆಯ ಕಡೆಗೆ ಚಲಿಸುತ್ತಿದ್ದ ಕಾರಿನ ನಡುವೆ ಈ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿ ರಸ್ತೆಯುದ್ದಕ್ಕೂ ಹರಡಿದ್ದವು. ಈ ಘಟನೆಯಿಂದಾಗಿ ನಗರದ ಹೃದಯಭಾಗದಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. 

ಅಪಘಾತಕ್ಕೀಡಾದ ಕಾರಿನಲ್ಲಿದ್ದ ಪ್ರಯಾಣಿಕರು ಸಾಗರ ಸಮೀಪದ ತೊಗರ್ಸಿ ಗ್ರಾಮದ ಮೂಲದವರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ವಾಹನಕ್ಕೆ ಭಾರಿ ಹಾನಿಯಾಗಿದ್ದರೂ, ಒಳಗಿದ್ದ ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಾಗರ ಪೊಲೀಸರು ವಾಹನಗಳನ್ನು ಪರಿಶೀಲಿಸಿ, ಜಖಂಗೊಂಡ ವಾಹನಗಳನ್ನು ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಿದರು. 

Accident Gas Tanker and Car Collide Passengers Safe

Accident Gas Tanker and Car Collide Passengers Safe
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.