RIPPONPET

ರಿಪ್ಪನ್‌ಪೇಟೆ: ಮೂಗೂಡ್ತಿ ಬಳಿ ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ರಿಪ್ಪನ್‌ಪೇಟೆ :  ಸಮೀಪದ ಮೂಗೂಡ್ತಿ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಶನಿವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾದಾಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಗೂಡ್ತಿ ನಿವಾಸಿ ಇಬ್ರಾಹಿಂ (69) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಡಿಕ್ಕಿಯಾದ ರಭಸಕ್ಕೆ ಈ ಸಾವು ಸಂಭವಿಸಿದೆ.

ಶಿವಮೊಗ್ಗ : ವಿಮಾನಗಳ ಸಲುವಾಗಿ ಸಂಸದರಿಗೆ ಬಿಗ್ ಮನವಿ!

ಮೃತ ಇಬ್ರಾಹಿಂ ಅವರು ರಿಪ್ಪನ್‌ಪೇಟೆಯಿಂದ ಬಸ್‌ನಲ್ಲಿ ಪ್ರಯಾಣಿಸಿ ಮೂಗೂಡ್ತಿ ನಿಲ್ದಾಣದಲ್ಲಿ ಇಳಿದಿದ್ದರು. ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಡಸ್ಟರ್ ಕಾರು ಅವರಿಗೆಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ರಾಹಿಂ ಗಂಭೀರವಾಗಿ ಗಾಯಗೊಂಡಿದ್ದರು. 

ಸ್ಥಳೀಯರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ರಿಪ್ಪನ್‌ಪೇಟೆ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರಾದರೂ, ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Accident Near Ripponpet Pedestrian Killed Car Hits

ದಾಖಲಾಗಿದೆ. Accident Near Ripponpet Pedestrian Killed Car Hits
ದಾಖಲಾಗಿದೆ. 

Accident Near Ripponpet Pedestrian Killed Car Hits
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.