ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಅರಹತೊಳಲು ಕೈಮರದ ಬಳಿ ಸಂಭವಿಸಿದೆ. ಭಗವತಿಕೆರೆ ಗ್ರಾಮದ ನಾಗ ನಾಯ್ಕ (50) ಮೃತಪಟ್ಟವರು
ನಾಗನಾಯ್ಕ ಸಾಮಾಗ್ರಿಗಳನ್ನು ತಮ್ಮ ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕಾರು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -

