Accident news/ ಕುಂದಾಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇನ್ನೋವ್ಹಾ ಕಾರು -ಲಾರಿ ನಡುವೆ ಡಿಕ್ಕಿ!

Accident News/ An Innova car coming from Kundapur to Shimoga collided with a lorry!

Accident news/  ಕುಂದಾಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇನ್ನೋವ್ಹಾ ಕಾರು -ಲಾರಿ ನಡುವೆ ಡಿಕ್ಕಿ!

KARNATAKA NEWS/ ONLINE / Malenadu today/ May 7, 2023 GOOGLE NEWS

ರಿಪ್ಪನ್ ಪೇಟೆ/ ಶಿವಮೊಗ್ಗ/ ಹೊಸನಗರ ತಾಲ್ಲೂಕಿನ ಸೂಡೂರು ಗೇಟ್​ ಬಳಿಯಲ್ಲಿ ನಿನ್ನೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಇನ್ನೋವ್ಹಾ ಕಾರಿನ ನಡುವೆ ಡಿಕ್ಕಿಯಾಗಿದ್ದು.ಕಾರಿನ ಮುಂಭಾಗ ಜಖಂ ಆಗಿದೆ. 

ಏನಾಯ್ತು?

ಕುಂದಾಪುರ ದಿಂದ ಶಿವಮೊಗ್ಗಕ್ಕೆ  ತೆರಳುತ್ತಿದ್ದ ಇನ್ನೋವ್ಹಾ ಕಾರು ಸೂಡೂರು ಗೇಟ್ ಬಳಿಯಲ್ಲಿ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಹೊಸನಗರಕ್ಕೆ ಹೋಗುತ್ತಿದ್ದ ಕ್ಯಾಂಟರ್​ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. 

ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಜಖಂ ಆಗಿದ್ದು ಕಾರು ಒಂದು ಕಡೆ ತಿರುಗಿನಿಂತಿದೆ. ಅದೃಷ್ಟವಶಾತ್ ಘಟನೆಯಲ್ಲಿ, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ.  ರಿಪ್ಪನ್​ಪೇಟೆ ಪೊಲೀಸರು ಸ್ಥಳಕ್ಕೆ ಬಂದು ಕಾರನ್ನ ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಶಾಸಕರ ತೋಟದ ಮನೆಗೆ ನುಗ್ಗಿ ಒಂದು ಕೆಜಿ ಚಿನ್ನ ದರೋಡೆ! ಬಂದೂಕು ತೋರಿಸಿ 15 ಜನರ ತಂಡದ ಕೃತ್ಯ! 



ತರಿಕೆರೆ/ ಚಿಕ್ಕಮಗಳೂರು/ ಇಲ್ಲಿನ ಮಾಜಿ ಶಾಸಕರೊಬ್ಬರ ಮನೆಯಲ್ಲಿ ದರೋಡೆ ನಡೆದಿದ್ದು, ಬರೋಬ್ಬರಿ ಒಂದು ಕೆಜಿ ಚಿನ್ನವನ್ನು  (gold)ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತರಿಕೆರೆಯಲ್ಲಿ ನಡೆದ ಈ ಘಟನೆ ಆತಂಕ ಮೂಡಿಸಿದ್ದು, ಪೊಲೀಸರಿಗೆ ಗಂಭೀರ ಸವಾಲೊಂದು ಎದುರಾಗಿದೆ. 

ನಡೆದಿದ್ದೇನು?

ತರಿಕೇರೆಯ ಮಾಜಿ ಶಾಸಕ ಎಸ್​. ಎಂ. ನಾಗರಾಜ್ರವರ​ ಮನೆಯಲ್ಲಿ ದರೊಡೆ ನಡೆದಿದೆ.  ಬಂದೂಕು ಹಾಗೂ ಮಚ್ಚಿನೊಂದಿಗೆ ಬಂದಿದ್ದ 15 ಕ್ಕೂ ಹೆಚ್ಚು ದುಷ್ಕರ್ಮಿಗಳು, ಮನೆಯಲ್ಲಿ ದರೋಡೆ ಮಾಡಿದ್ದಾರೆ. 

 

ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿರುವ ನಾಗರಾಜ್​​ ಅವರ ತೋಟದ ಮನೆಯಲ್ಲಿ ಕೃತ್ಯ ನಡೆದಿದೆ. ರಾತ್ರಿ ತೋಟದ ಮನೆಯ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು, ಒಳಗಿದ್ದವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ

ಅಲ್ಲದೆ ಬಂದೂಕು ತೋರಿಸಿ ಬೆದರಿಸಿದ್ದಾರೆ. ಆ ಮೂಲಕ 1ಕೆಜಿಗೂ ಅಧಿಕ ಚಿನ್ನಾಭರಣ  ಹಾಗೂ ಹಣ ದೋಚಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಉಮ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




ಆಯನೂರಿಗೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಆಯನೂರು/ ಶಿವಮೊಗ್ಗ/ ಶಿವಮೊಗ್ಗದ ಆಯನೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra modi) ಬರ್ತಿದ್ದಾರೆ. ಅವರ ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. 

ಎಷ್ಟೊತ್ತಿಗೆ ಬರುತ್ತಾರೆ ಪ್ರಧಾನಿ ನರೇಂದ್ರ ಮೋದಿ

ಮೇ 7 ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ  ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 

2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ

3 ಲಕ್ಷ ಜನ ಸೇರುವೆ ನಿರೀಕ್ಷೆ

ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ ಹಾಗೂ ದಾವಣಗೆರೆಯ 2 ಮತ್ತು ಚಿಕ್ಕಮಗಳೂರಿನ ಒಂದು ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರ ನಡೆಸಲಿದ್ದಾರೆ.  ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್​ನಲ್ಲಿ ತಲ್ಲೀನವಾಗಿದೆ. 

 

ಊಟದ ವ್ಯವಸ್ಥೆಯಿಲ್ಲ

ಇನ್ನೂ ನೀತಿಸಂಹಿತೆ ಹಿನ್ನೆಲೆಯಲ್ಲಿ ಮೋದಿ ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆಯನ್ನು ಕೈಗೊಳ್ಳಲಾಗಿಲ್ಲ. ಕುಡಿಯಲು ನೀರು ಹಾಗೂ ಮಜ್ಜಿಗೆಯ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು, ಜನರನ್ನ ಕರೆತರಲು ವಾಹನಗಳ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎನ್ನುತ್ತಿದ್ದಾರೆ ಮುಖಂಡರು. 

ಸಿಂಗಾರಗೊಂಡ ಆಯನೂರು

ಆಯನೂರಿನಿಂದ ಶಿವಮೊಗ್ಗ ಕಡೆ ಬರುವ 2 ಕಿಮೀ. ಹಾಗೂ ಆಯನೂರಿನಿಂದ ಕುಂಸಿಗೆ ಹೋಗುವ 1 ಕಿಮೀ. ರಸ್ತೆ ಉದ್ದಕ್ಕೂ  ಮೋದಿ ಕಾರ್ಯಕ್ರಮಕ್ಕಾಗಿ ಬ್ಯಾನರ್ ಬಂಟಿಂಗ್ಸ್ ಪ್ಲೆಕ್ಸ್​ಗಳನ್ನು ಹಾಕಲಾಗುತ್ತಿದೆ. 

ಕೇಸರಿ ಬಣ್ಣಗಳ ತಳಿರು ತೋರಣಗಳಲ್ಲಿ ಸಿಂಗಾರಗೊಳ್ಳುತ್ತಿರುವ ಆಯನೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಚುನಾವಣೆಯ ಕೊನೆಯ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. 




Read/ Bhadravati/  ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್ 

Read/ Kichcha Sudeepa/  ನಟ ಸುದೀಪ್​ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್​ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ? 

Malenadutoday.com Social media