ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಇವತ್ತು ಆಕ್ಸಿಡೆಂಟ್ ಆಗಿದೆ. ಕಾರು ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗರ್ತಿಕೆರೆ ಗ್ರಾಮದ ಪೆಟ್ರೋಲ್ ಬಂಕ್ವೊಂದರ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ರಿಪ್ಪನ್ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆಗೆ ಅಡ್ಡವಾಗಿ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಡಿಕ್ಕಿಯಾಗಿದೆ. ಬಳಿಕ ಕಾರು , ರಸ್ತೆ ಪಕ್ಕದ ಚರಂಡಿಗೆ ಉರುಳಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಸ್ಥಳಕ್ಕೆ ರಿಪ್ಪನ್ಪೇಟೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನೂ ಗಾಯಗೊಂಡಿರುವ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com