ಶಿವಮೊಗ್ಗ : ನಗರದ ಹೊರವಲಯದಲ್ಲಿರುವ ಜೈನ್ ಪಬ್ಲಿಕ್ ಸ್ಕೂಲ್ ಬಳಿ ನಿನ್ನೆ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರಾವತಿ ಮೂಲದ ಮಂಜಪ್ಪ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಕೇವಲ 15 ದಿನಗಳ ಹಿಂದೆಯಷ್ಟೇ ಜೈನ್ ಪಬ್ಲಿಕ್ ಸ್ಕೂಲ್ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದ ಮಂಜಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -