accident today ತೀರ್ಥಹಳ್ಳಿ ಬಳಿ ಖಾಸಗಿ ಬಸ್-ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಸಮೀಪ ಖಾಸಗಿ ಬಸ್ ಮತ್ತು ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗೂಡ್ಸ್ ವಾಹನದ ಚಾಲಕ ಗಾಯಗೊಂಡಿದ್ದಾರೆ.
ಘಟನೆ ಇಂದು ಬೆಳಿಗ್ಗೆ ಸಂಭವಿಸಿದ್ದು, ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ, ಮಂಗಳೂರಿನಿಂದ ಬರುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನದ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
