ರೇಣುಕಸ್ವಾಮಿ ಕೊಲೆ ಪ್ರಕರಣ , ಮತ್ತೆ ಮಹತ್ವದ ಹೆಜ್ಜೆ ಇಟ್ಟ ನಟ ದರ್ಶನ್​ ತೂಗುದೀಪ Actor

ಹಂಚಿಕೊಳ್ಳಿ
WhatsApp Facebook X Telegram
  ರೇಣುಕಸ್ವಾಮಿ ಕೊಲೆ ಪ್ರಕರಣ , ಮತ್ತೆ ಮಹತ್ವದ ಹೆಜ್ಜೆ ಇಟ್ಟ ನಟ ದರ್ಶನ್​ ತೂಗುದೀಪ Actor Darshan Approaches Supreme Court for Bail in Renukaswamy Murder Case

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮಹತ್ವದ ಹೆಜ್ಜೆಯೊಂದನ್ನ ಇಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್ ಇದೀಗ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿಂದೆ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು 2025 ರ ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು.

ಹೈಕೋರ್ಟ್​ ಮೊರೆ ಹೋದ ನಟ ದರ್ಶನ್​ ತೂಗುದೀಪ

ಇದೀಗ ಮತ್ತೆ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿರುವ ನಟ ದರ್ಶನ್, ಪ್ರಕರಣದ ವಿಚಾರಣಾ ಪ್ರಕ್ರಿಯೆಯಲ್ಲಿ ತೀವ್ರ ವಿಳಂಬವಾಗುತ್ತಿರುವುದನ್ನು ಅರ್ಜಿಯಲ್ಲಿ ಪ್ರಸ್ತಾಪಿಸಿದ್ದಾರೆ. ಕೊಲೆ ಪ್ರಕರಣದ ವಿಚಾರಣೆಯು ಪ್ರಸ್ತುತ ನಡೆಯುತ್ತಿದ್ದು, ಎಂಟು ತಿಂಗಳುಗಳೇ ಕಳೆದರೂ ಸಾಕ್ಷಿಗಳ ವಿಚಾರಣೆ ಇನ್ನೂ ಮುಕ್ತಾಯಗೊಂಡಿಲ್ಲ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಒಟ್ಟು 273 ಸಾಕ್ಷಿಗಳ ಪೈಕಿ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ಈವರೆಗೆ ಪೂರ್ಣಗೊಂಡಿದೆ. ಸಾಕ್ಷಿಗಳ ವಿಚಾರಣೆಯಲ್ಲಿ ಬಹಳ ವಿಳಂಬವಾಗುತ್ತಿದ್ದು, ಇದೇ ರೀತಿ ಮುಂದುವರಿದರೆ ಸಂಪೂರ್ಣ ವಿಚಾರಣೆ ಮುಗಿಯಲು ಇನ್ನೂ ಹಲವು ವರ್ಷಗಳು ಬೇಕಾಗಬಹುದು. ಈ ಕಾರಣದಿಂದಾಗಿ ತಮಗೆ ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಅವರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯು ಮೇ 5 ರಂದು ನಡೆಯಲಿದೆ.

  ರೇಣುಕಸ್ವಾಮಿ ಕೊಲೆ ಪ್ರಕರಣ , ಮತ್ತೆ ಮಹತ್ವದ ಹೆಜ್ಜೆ ಇಟ್ಟ ನಟ ದರ್ಶನ್​ ತೂಗುದೀಪ Actor Darshan Approaches Supreme Court for Bail in Renukaswamy Murder Case
  ರೇಣುಕಸ್ವಾಮಿ ಕೊಲೆ ಪ್ರಕರಣ , ಮತ್ತೆ ಮಹತ್ವದ ಹೆಜ್ಜೆ ಇಟ್ಟ ನಟ ದರ್ಶನ್​ ತೂಗುದೀಪ Actor Darshan Approaches Supreme Court for Bail in Renukaswamy Murder Case

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor