ಹಿಟ್ಲರ್​​ ಕಲ್ಯಾಣ ಧಾರವಾಹಿ ಖ್ಯಾತಿಯ ದಿಲೀಪ್ ರಾಜ್ ಇನ್ನಿಲ್ಲ

ಹಂಚಿಕೊಳ್ಳಿ
WhatsApp Facebook X Telegram
Actor Dilip Raj
Actor Dilip Raj

Actor Dilip Raj ಬೆಂಗಳೂರು : ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ಯಶಸ್ವಿ ನಿರ್ಮಾಪಕ ದಿಲೀಪ್ ರಾಜ್ (47) ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಬುಧವಾರ ಬೆಳಿಗ್ಗೆ ಸಂಭವಿಸಿದ ತೀವ್ರ ಹೃದಯಾಘಾತ ಅವರ ಸಾವಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ನಗರದ ಈ ಭಾಗಗಳಲ್ಲಿ 2 ದಿನ  ವಿದ್ಯುತ್ ವ್ಯತ್ಯಯ

ಮನೆಯಲ್ಲಿದ್ದ ಸಮಯದಲ್ಲೇ ದಿಲೀಪ್ ರಾಜ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಸೂಪರ್ ಹಿಟ್ ಮಿಲನ ಚಿತ್ರದ ಮೂಲಕ ಕನ್ನಡಿಗರ ಮನಗೆದ್ದಿದ್ದ ದಿಲೀಪ್ ರಾಜ್, ಯು-ಟರ್ನ್ ಮತ್ತು ಬಾಯ್‌ಫ್ರೆಂಡ್ ಅಂತಹ ವಿಭಿನ್ನ ಸಿನಿಮಾಗಳಲ್ಲಿ ನಟಿಸಿದ್ದರು. ಕೇವಲ ನಟನೆಯಷ್ಟೇ ಅಲ್ಲದೆ, ಡಿ.ಆರ್. ಕ್ರಿಯೇಷನ್ಸ್ ಎಂಬ ಸಂಸ್ಥೆಯ ಮೂಲಕ ಹಲವು ಜನಪ್ರಿಯ ಧಾರಾವಾಹಿಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿದ್ದರು.

Actor Dilip Raj Passes Away Due to Heart Attack

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor