Agniveer Recruitment Rally ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ನವೆಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ಆಯೋಜಿಸಲಾಗಿದೆ. ಈ ನೇಮಕಾತಿ ರ‍್ಯಾಲಿಗೆ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಕಳೆದ ಜೂನ್ 30 ರಿಂದ ಜುಲೈ 10ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮಾತ್ರ ಈ ರ‍್ಯಾಲಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ಎಂಬ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ (ಪ್ರ) ಡಾ. ಸಿ.ಎ. ಹಿರೇಮಠ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಅಗ್ನಿವೀರ್ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದ ಅಭ್ಯರ್ಥಿಗಳು ನಿಗದಿತ ದಿನಾಂಕಗಳಲ್ಲಿ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣಕ್ಕೆ ಹಾಜರಾಗಬೇಕು. ಈ ಮೂಲಕ ದೇಶದ ಯುವಕರಿಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ಮತ್ತೊಂದು ದೊಡ್ಡ ಅವಕಾಶ ಲಭ್ಯವಾಗಿದೆ.

Agniveer Recruitment Rally

