AGUMBE

ಆಗುಂಬೆ ಘಾಟಿಯಲ್ಲಿ ಸುರಂಗ ಯೋಜನೆ! ಮತ್ತೊಂದು ಅಪ್​ಡೇಟ್ ನೀಡಿದ ಕೇಂದ್ರ ಸರ್ಕಾರ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಅಪ್​ಡೇಟ್ ಸಿಕ್ಕಿದೆ.  ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯನ್ನು ದ್ವಿಪಥ ರಸ್ತೆ ಹಾಗೂ ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ   ಕಾರ್ಯ ಸಾಧ್ಯತೆ ಅಧ್ಯಯನ ಮತ್ತು ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಭೂಸಾರಿಗೆ ಇಲಾಖೆ ಟೆಂಡರ್ ಆಹ್ವಾನಿಸಿದೆ.

ರಸ್ತೆ ವಿಸ್ತರಣೆಗೆ ಅಷ್ಟೆಯಲ್ಲದೆ ಡಿಪಿಆರ್​ನಲ್ಲಿ ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರನ್ನು ತೊಡಗಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಆಗುಂಬೆ ಸುರಂಗದ ನಿರ್ಮಾಣದ ಕಾರ್ಯ ಸಾಧ್ಯತೆಯನ್ನು ಈಮೂಲಕ ಪರಿಶೀಲನೆ ನಡೆಸಲಾಗುತ್ತದೆ ಎಂದೇ ನಂಬಲಾಗುತ್ತಿದೆ.ಈ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಮೀಸಲು ನಿಬಂಧನೆಗಳೊಂದಿಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. 

Malenadu Today Shivamogga
Agumbe Ghat Tunnel Project Kannada News

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ! ಕಾರಣವೇನು?

ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಪಶ್ಚಿಮ ಘಟ್ಟ ಪ್ರದೇಶದದ ನಿಸರ್ಗಕ್ಕೆ ಧಕ್ಕೆ ಆಗದಂತೆ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಕೈಗೊಳ್ಳುವ ನಿಟ್ಟಿನಲ್ಲಿ ಡಿಪಿಆರ್ ತಯಾರಿಸಲಾಗುತ್ತದೆ ಎನ್ನಲಾಗಿದೆ. ಇನ್ನೂ ಈ ನಿಟ್ಟಿನಲ್ಲಿ ಯೋಜನೆಯ ಮುಂದಿನ ಹಂತಗಳಿಗೆ ಸಂಬಂಧಿಸಿದಂತೆ ಕೇಂದ್ರದೊಂದಿಗೆ ನಿರಂತರ ಸಮನ್ವಯ ಮುಂದುವರಿಸಲಾಗುವುದು ಎಂದು ಸಂಸದ ಬಿವೈ ರಾಘವೇಂದ್ರ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಯೋಜನೆಯು ಕಾರ್ಯರೂಪಕ್ಕೆ ಬಂದರೆ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ನಡುವಿನ ಸಂಪರ್ಕ ಇನ್ನಷ್ಟು ವೇಗ ಮತ್ತು ಸುರಕ್ಷಿ ಎನಿಸಲಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ 

ಆಗುಂಬೆ ಘಾಟಿ | ತಿರುವಿನಲ್ಲಿ ಅರ್ಧ ಕೆಳಕ್ಕೆ ಇಳಿದ ಸ್ಕೂಲ್​ ಮಕ್ಕಳಿದ್ದ ಬಸ್​ | ಬೆಂಗಳೂರಿನಿಂದ ಬಂದಿದ್ದವರು ಬಚಾವ್!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Agumbe Ghat Tunnel Project Kannada News
Agumbe Ghat Tunnel Project Kannada News

ಆಗುಂಬೆ ಸಮೀಪ ಕಾರು ಪಲ್ಟಿ! ತೋಟದೊಳಗೆ ಬಿದ್ದ ವಾಹನ! ಚಿಕ್ಕಮಗಳೂರು ಮೂಲದ ಮೂವರಿಗೆ ಗಂಭಿರ ಗಾಯ

ಆಗುಂಬೆ ಘಾಟಿ ಸುರಂಗಕ್ಕೆ ಡಿಪಿಆರ್ ಸಿದ್ಧತೆ. Agumbe Ghat Tunnel Project Kannada News

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ