ಆಗುಂಬೆ: ಮರ್ಯಾದೆ ತೆಗೆಯುತ್ತಾಳೆ ಎಂದು ಮಹಿಳೆಯ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ

ಹಂಚಿಕೊಳ್ಳಿ
WhatsApp Facebook X Telegram
Shivamogga
Shivamogga

ಆಗುಂಬೆ: ವ್ಯಕ್ತಿಯೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿ, ನಂತರ ಆಕೆ ತನ್ನ ಮರ್ಯಾದೆ ತೆಗೆಯುತ್ತಾಳೆ ಎಂದು ಹೆದರಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ.

ಶಿವಮೊಗ್ಗ: ಸ್ವಂತ ಮಗ, ಸ್ನೇಹಿತರಿಂದಲೇ ಮನೆಯಲ್ಲಿ ಕಳ್ಳತನ? ಪೊಲೀಸರಿಗೆ ದೂರು ನೀಡಿದ ತಂದೆ!

Agumbe Murder ಪ್ರಕರಣದ ಹಿನ್ನೆಲೆ

2022  ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಗೋಡು ಗ್ರಾಮದ ನಿವಾಸಿ, ಆರೋಪಿ ರಾಜಪ್ಪ (36 ವರ್ಷ) ಎಂಬಾತನು  ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಬಳಿಕ ಆಕೆ ತನ್ನ ಮರ್ಯಾದೆ ತೆಗೆಯುತ್ತಾಳೆ ಎಂಬ ಭಯದಿಂದ, ಗುದ್ದಲಿಯಿಂದ ಹೊಡೆದು ಆಕೆಯನ್ನು ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಪಾರ್ವತಮ್ಮನ ಮೃತದೇಹವನ್ನು ಬಾವಿಗೆ ಎಸೆದಿದ್ದನು. ಈ ಘಟನೆಗೆ ಸಂಬಂಧಿಸಿದಂತೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.

ಮಾಳೂರು ಸಿಪಿಐ ಆಗಿದ್ದ ಪ್ರವೀಣ್ ನೀಲಮ್ಮನವರ್ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕರಾ ಶಾಂತರಾಜ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಆರೋಪಿಯ ವಿರುದ್ಧದ ಎಲ್ಲಾ ಆರೋಪಗಳು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ಅಪರಾಧಿ ರಾಜಪ್ಪನಿಗೆ ಐಪಿಸಿ ಕಾಯ್ದೆ ಕಲಂ 302 (ಕೊಲೆ) ಮತ್ತು 201 (ಸಾಕ್ಷ್ಯ ನಾಶ) ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor