ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಸುರಂಗ ನಿರ್ಮಾಣ ಕಾರ್ಯಕ್ಕೆ ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯನ್ನು ದ್ವಿಪಥ ರಸ್ತೆ ಹಾಗೂ ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಕಾರ್ಯ ಸಾಧ್ಯತೆ ಅಧ್ಯಯನ ಮತ್ತು ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಭೂಸಾರಿಗೆ ಇಲಾಖೆ ಈಗಾಗಲೇ ಟೆಂಡರ್ ಆಹ್ವಾನಿಸಿದೆ.

ಶಿವಮೊಗ್ಗ: ಸೋಗಾನೆ ಜೈಲಿಗೆ ಗಾಂಜಾ, ಮೊಬೈಲ್ ಎಸೆದಿದ್ದ ನಾಲ್ವರು ಅರೆಸ್ಟ್
ಈ ಕುರಿತು ಇಂದು ಸಂಸದ ಬಿವೈ ರಾಘವೇಂದ್ರ ಮಾಹಿತಿ ನೀಡಿ ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯಲ್ಲಿ ರಸ್ತೆಯನ್ನು ದ್ವಿಪಥ (2-Lane) ರಸ್ತೆಯನ್ನಾಗಿ ಮತ್ತು ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸಲು ಯೋಜಿಸಲಾಗಿದೆ. ಈ ಯೋಜನೆಯಡಿ 4 ಲೇನ್ ವೈಡಿಂಗ್ ಮತ್ತು ಆಗುಂಬೆ ಟನಲ್ ನಿರ್ಮಾಣದ ಡಿಪಿಆರ್ ಸಿದ್ಧಪಡಿಸಲು ಒಟ್ಟು 2.2 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ 6 ತಿಂಗಳ ಅವಧಿಯಲ್ಲಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಈ ಯೋಜನೆ ಅತ್ಯಂತ ಜಾಗರೂಕತೆಯಿಂದ ಕೂಡಿದೆ. “ಹಿಂದಿನ ಅತ್ಯಾಧುನಿಕ ತಂತ್ರಜ್ಞಾನವನ್ನೇ ಬಳಸಿಕೊಂಡು ಟನಲ್ ನಿರ್ಮಿಸಲು ಉದ್ದೇಶಿಸಲಾಗಿದೆ. ಮಲೆನಾಡಿನ ಸೂಕ್ಷ್ಮ ಪರಿಸರಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಮತ್ತು ಅರಣ್ಯ ಪ್ರದೇಶಕ್ಕೆ ತೊಂದರೆಯಾಗದಂತೆ ಸುರಂಗ ಮಾರ್ಗವನ್ನು ಹೇಗೆ ನಿರ್ಮಿಸಬಹುದು ಎಂಬ ಬಗ್ಗೆ ತಜ್ಞರು ಯೋಚಿಸುತ್ತಿದ್ದಾರೆ. “ಎಂದು ರಾಘವೇಂದ್ರ ಅವರು ವಿವರಿಸಿದರು.

Agumbe Tunnel MP Raghavendra Confirms

