air india flight crashes near ahmedabad airport
ಅಹಮದಾಬಾದ್, ಜೂನ್ 12: ಸುಮಾರು 242 ಪ್ರಯಾಣಿಕರನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿರುವ ಆಘಾತಕಾರಿ ಘಟನೆ ಇಂದು ಮಧ್ಯಾಹ್ನ ನಡೆದಿದೆ. ವಿಮಾನವು ಅಹಮದಾಬಾದ್‌ನ ಮೇಘನಿನಗರ ಪ್ರದೇಶಕ್ಕೆ ಅಪ್ಪಳಿಸಿದೆ ಎನ್ನಲಾಗಿದ್ದು, ತೀವ್ರ ಹೊಗೆ ಆವರಿಸಿರುವುದು ಕಂಡುಬಂದಿದೆ.
ವಿಮಾನದಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸ್ಥಿತಿಯ ಬಗ್ಗೆ ಪ್ರಸ್ತುತ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ವಿಮಾನ ಪತನಗೊಂಡ ಸ್ಥಳದಿಂದ ದಟ್ಟವಾದ ಹೊಗೆ ಆಕಾಶದೆತ್ತರಕ್ಕೆ ಚಿಮ್ಮುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.
air india flight crashes ಈ ದುರ್ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ನಿರೀಕ್ಷಿಸಲಾಗಿದ್ದು, ವಿಮಾನ ಪತನಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

View this post on Instagram