ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 20 2025 : ಭದ್ರಾವತಿ ತಾಲ್ಲೂಕುನಲ್ಲಿ ಇರವು ಆಕಾಶವಾಣಿ ಭದ್ರಾವತಿ ಕೇಂದ್ರವು ಇದೇ ಸೆಪ್ಟೆಂಬರ್ 23 ರ ಮಂಗಳವಾರ ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ‘ ಎಂಬ ನೇರ ಫೋನ್-ಇನ್ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ.
ಈ ಕಾರ್ಯಕ್ರಮದಲ್ಲಿ ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಪ್ರಕಟಣೆ ನೀಡಲಾಗಿದೆ.
ಚಿಕ್ಕಮಗಳೂರು ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಅರುಣ್‌ಕುಮಾರ್ ಕೆ.ಎಲ್. ಅವರು ಈ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿಯ ಅನುಕೂಲಗಳ ಬಗ್ಗೆ ಕೇಳುಗರಿಗೆ ಮಾಹಿತಿ ನೀಡಲಿದ್ದಾರೆ.

ಸಾರ್ವಜನಿಕರು ದೂರವಾಣಿ ಕರೆ ಅಥವಾ ವಾಟ್ಸಾಪ್ ಸಂದೇಶದ ಮೂಲಕ ತಮ್ಮ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಬಹುದು. ಪ್ರಶ್ನೆಗಳನ್ನು ಕೇಳಲು ದೂರವಾಣಿ ಸಂಖ್ಯೆಗಳು: 08282-270282, 270283. ವಾಟ್ಸಾಪ್ ಸಂದೇಶ ಕಳುಹಿಸಲು ದೂರವಾಣಿ ಸಂಖ್ಯೆ: 9481572600.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!