Akka Pade Recruitment 2025 ನವೆಂಬರ್, 08, 2025 ರ ಮಲೆನಾಡು ಟುಡೆ ಸುದ್ದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ಹಾಗೂ ದುರ್ಬಲ ವರ್ಗದ ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ರಕ್ಷಣೆ ಒದಗಿಸುವ ಮಹತ್ವದ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ಎಂಬ ವಿಶೇಷ ತಂಡವನ್ನು ರಚಿಸಲು ಮುಂದಾಗಿದೆ.

ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ದರ? ರಾಶಿ, ಬೆಟ್ಟೆ, ಸರಕು, ಚಾಲಿ ಅಡಕೆ ರೇಟು?
ಈ ಹಿನ್ನೆಲೆಯಲ್ಲಿ ಈ ತಂಡದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಸೇವಾ ಗುತ್ತಿಗೆ ಆಧಾರದ ಮೇಲೆ ಐವರು ಮಹಿಳಾ ಅಭ್ಯರ್ಥಿಗಳನ್ನು ಈ ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಎನ್.ಸಿ.ಸಿ. ‘ಸಿ’ ಪ್ರಮಾಣ ಪತ್ರವನ್ನು ಹೊಂದಿರಬೇಕು.
- ಅಲ್ಲದೆ, ಅಭ್ಯರ್ಥಿಗಳ ವಯಸ್ಸು 35 ವರ್ಷದಿಂದ 45 ವರ್ಷಗಳ ನಡುವೆ ಇರಬೇಕು.
- ಉತ್ತಮ ದೈಹಿಕ ಸಾಮರ್ಥ್ಯದೊಂದಿಗೆ ಸ್ಥಳೀಯ ನಿವಾಸಿಗಳಾಗಿರುವುದು ಸಹ ಅಗತ್ಯವಾಗಿದೆ.
- ಆಯ್ಕೆಯಾದ ಅಭ್ಯರ್ಥಿಗಳು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಎರಡು ಪಾಳಿಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು.
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅರ್ಹ ಮಹಿಳೆಯರು, ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇಲ್ಲಿಗೆ ದಿನಾಂಕ ನವೆಂಬರ್ 13, 2025 ರೊಳಗೆ ಸಲ್ಲಿಸಬಹುದು.

ದಿನಭವಿಷ್ಯ! ಪ್ರಮುಖ ರಾಶಿಗಳಿಗಿಂದು ಶುಭದಿನ! ಕೈಗೂಡಲಿದೆ ಕನಸು!
ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 08182-295514 ಗೆ ಕರೆ ಮಾಡಬಹುದು ಅಥವಾ ddwcdshimoga@gmail.com ವಿಳಾಸಕ್ಕೆ ಇಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ್ ಅವರು ತಿಳಿಸಿದ್ದಾರೆ. Akka Pade Recruitment 2025
ಶಿವಮೊಗ್ಗ ಜೈಲು ಗೇಟ್ನಲ್ಲಿಯೇ ವಾಸೀಂ ಅರೆಸ್ಟ್!, ಮಾಳೂರು ಸಮೀಪ ಬಾಣಂತಿ ಸಾವು! ಶಿವಮೊಗ್ಗದಲ್ಲಿ ಏನೆಲ್ಲಾ ಆಯ್ತು!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
