ನವೆಂಬರ್ 10 2025 ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದ ಬ್ಯಾಂಕ್ ಒಂದರಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಿರಿಯ ಅಧಿಕಾರಿಯಿಂದ ಲೈಂಗಿಕ ದೌರ್ಜನ್ಯ ಆರೋಪ, ಕಚೇರಿ ಮೀಟಿಂಗ್ ನೆಪದಲ್ಲಿ ಹೋಟೆಲ್ಗೆ ಕರೆಸಿ ಅಸಭ್ಯ ವರ್ತನೆ ಎಂದು ದೂರು, ಉಡುಪಿ ಜಿಲ್ಲೆಯ ಪ್ರಕರಣ, ಶಿವಮೊಗ್ಗ ಜಿಲ್ಲೆಯ ಪೊಲೀಸ್ ಠಾಣೆಯೊಂದಕ್ಕೆ ಪ್ರಕರಣ ವರ್ಗಾವಣೆ;

ನಾಳೆ ಶಿವಮೊಗ್ಗದ ಪ್ರಮುಖ ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಶಿವಮೊಗ್ಗ ನಗರದಲ್ಲಿರುವ ಬ್ಯಾಂಕ್ ಶಾಖೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಮೇಲೆ, ಅದೇ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಸಂಬಂಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಉಡುಪಿ ಜಿಲ್ಲೆಯಲ್ಲಿ ದಾಖಲಾಗಿದ್ದ ಪ್ರಕರಣ ಇದೀಗ ಶಿವಮೊಗ್ಗಕ್ಕೆ ವರ್ಗಾವಣೆ ಆಗಿದೆ.
ಶಿವಮೊಗ್ಗ : ದುಮ್ಮಳ್ಳಿಯಲ್ಲಿ ಮಹಿಳೆಯ ಬರ್ಬರ ಹತ್ಯೆ! ನಡೆದಿದ್ದೇನು?
ಬ್ಯಾಂಕ್ ಒಂದರ ಸಿಬ್ಬಂದಿ, ಸಂತ್ರಸ್ತೆ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕಚೇರಿ ಕೆಲಸದ ಹೆಸರಲ್ಲಿ ಬರಮಾಡಿಕೊಂಡು ಅಸಭ್ಯವಾಗಿ ವರ್ತಿಸ್ತಿದ್ದ ಸಿಬ್ಬಂದಿ, ಖಾಸಗಿ ಹೋಟೆಲ್ವೊಂದರಲ್ಲಿ ಅಸಭ್ಯವಾಗಿ ಸ್ಪರ್ಶಿಸಿ, ಕೆಟ್ಟದಾಗಿ ನಡೆದುಕೊಂಡಿದ್ದರು ಎಂದು ದೂರಲಾಗಿದೆ. ಇದಷ್ಟೆ ಅಲ್ಲದೆ, ವಿರೋಧಿಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ ಹಾಗೂ ಬ್ಯಾಂಕ್ನ ಕೆಲವರು ಸಂತ್ರಸ್ತೆಯ ಚಾರಿತ್ರ್ಯದ ಬಗ್ಗೆ ಸಲ್ಲದ ಮಾತುಗಳನ್ನು ಆಡಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಪೊಲೀಸರು ಈಗಾಗಲೇ ತನಿಖೆಯನ್ನು ಆರಂಭಿಸಿದ್ದು, ವಿಚಾರಣೆ ನಡೆಯುತ್ತಿದೆ.

ಶಿವಮೊಗ್ಗದ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್ : ಕಾರಣವೇನು
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
