KARNATAKA NEWS/ ONLINE / Malenadu today/ Oct 17, 2023 SHIVAMOGGA NEWS
ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಿಂಧ 22 ವರ್ಷದ ಯುವಕ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದೆ.
ಪವನ್, 22 ವರ್ಷ ವಾಸ ಬಸವನಗುಡಿ, 4ನೇ ಕ್ರಾಸ್, ಶಿವಮೊಗ್ಗ ಈ ವ್ಯಕ್ತಿ ಅ.9 ರಂದು ಶಿವಮೊಗ್ಗದ ಎ.ಎ. ಕಾಲೋನಿ ಚೌಡಮ್ಮ ದೇವಸ್ಥಾನದ ಹಿಂಭಾಗದಲ್ಲಿರುವ ತಮ್ಮ ಅಜ್ಜಿಯ ಮನೆಯಿಂದ ಕಾಣೆಯಾಗಿದ್ದಾನೆ.
ಕಾಣೆಯಾದ ಪವನ್ ಸುಮಾರು 5.4 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಮನೆಯಿಂದ ಕಾಣೆಯಾದ ವೇಳೆ ಕಪ್ಪು ಬಣ್ಣದ ಟೀಷರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.
ಈತನ ಪತ್ತೆಯಾದಲ್ಲಿ ಮಾಹಿತಿಯನ್ನು ಜಯನಗರ ಪೊಲೀಸ್ ಠಾಣೆ, ಶಿವಮೊಗ್ಗ ಜಿಲ್ಲಾ ನಿಸ್ತಂತು ಕೇಂದ್ರ, ಎಸ್‍ಪಿ ಶಿವಮೊಗ್ಗ 08182-261400, ಜಿಲ್ಲಾ ಕಂಟ್ರೋಲ್ ರೂಂ. 08182-261413, ಜಯನಗರ ಪೊಲೀಸ್ ಠಾಣೆ 08182-261416 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಇನ್ನಷ್ಟು ಸುದ್ದಿಗಳು
ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL
ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ
