ಪತ್ನಿಯ ಮೇಲಿನ ಸ ಸಿಟ್ಟಿಗೆ ಆಕೆಯನ್ನು ಕೊಲೆ ಮಾಡಲೆತ್ನಿಸಿದ ಘಟನೆಗೆ ಸಂಬಂಧ ಪಟ್ಟಂತೆ ಶಿವಮೊಗ್ಗ ಕೋರ್ಟ್ ಆರೋಪಿಗಳಿಗೆ ಎರಡು ವರ್ಷಗಳ ಶಿಕ್ಷೆ ವಿದಿಸಿದೆ.
ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ !
ನಡೆದಿದ್ದೇನು?
ಶೋಭಾ ಎನ್ನುವವರು 2016 ರ ಡಿಸೆಂಬರ್ 28 ರಂದು ತಮ್ಮ ತಾಯಿಯೊಂದಿಗೆ ಮಲವಗೊಪ್ಪ ಬಸ್ ನಿಲ್ದಾಣದ ಬಳಿ ನಿಂತಿದ್ದರು. ಈ ವೇಳೆ ಅಲ್ಲಿಗೆ ಬಂದ ಪತಿ ಹಾಲೇಶ್ ನಾಯ್ಕ, ಹೆಂಡತಿಯ ಮೇಲೆ ಹಲ್ಲೆ ಮಾಡಿದ್ದ. ಮಚ್ಚಿನಿಂದ ತಲೆ ಮತ್ತು ಕೈಕಾಲಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಗಾಯಗೊಳಿಸಿದ್ದ. ಈ ಕೃತ್ಯಕ್ಕೆ ಮೂವರು ಕುಮ್ಮಕ್ಕು ನೀಡಿದ್ದಾರೆಂದು ದೂರು ದಾಖಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ತುಂಗಾನಗರ ಪೊಲೀಸ್ ಠಾಣೆಯ ಅಂದಿನ ಸಿಪಿಐ ಬಿ. ಸಿ. ಗಿರೀಶ್ , ಚಾರ್ಜ್ಶೀಟ್ ಸಲ್ಲಿಸಿದ್ದರು.
ತೀರ್ಪು ನೀಡಿದ ಕೋರ್ಟ್
ಸದ್ಯ ಈ ಕೇಸ್ನ ವಿಚಾರಣೆ ನಡೆದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದ್ದು, ಆರೋಪಿತರಿಗೆ 2 ವರ್ಷಗಳ ಕಾಲ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ 22,000 ರೂ ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲರಾದರೆ ಹೆಚ್ಚುವರಿ 3 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದೆ.
*ರಾಜ್ಯದ ಕೊಡಗು-ಕೇರಳ ಬಾರ್ಡರ್ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್ ತಂಡ*
JP BIG EXCLUSIVE : ಸಕ್ರೆಬೈಲ್ ಅನೆ ಬಿಡಾರದಿಂದ ಮತ್ತೆ ಮೂರು ಆನೆಗಳ ಸ್ಥಳಾಂತರಕ್ಕೆ ಬೇಡಿಕೆ!
ನಂದಿನಿ ಜಂಬೋ ಪಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಳ!
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com