ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ!

An incident between a private bus and a car took place near Gajanur ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಘಟನೆ ಗಾಜನೂರು ಬಳಿ ಸಂಭವಿಸಿದೆ

ಗಾಜನೂರು ಸಮೀಪ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ!

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’ 

ಶಿವಮೊಗ್ಗ ಜಿಲ್ಲೆ ಗಾಜನೂರು ಬಳಿಯಲ್ಲಿ ನಿನ್ನೆ ಅಪಘಾತವೊಂದು ಸಂಭವಿಸಿದೆ. ಖಾಸಗಿ ಬಸ್​ ಹಾಗೂ ಕಾರೊಂದದರ ನಡುವೆ ಡಿಕ್ಕಿಯಾಗಿದೆ. 

ನಿನ್ನೆ ಸಂಜೆ ಹೊತ್ತಿಗೆ ನಡೆದ ಘಟನೆ ಇದಾಗಿದ್ದು, ಕಾರು ಹಾಗೂ ಬಸ್​ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್​ನ ಮುಂಭಾಗ ಜಖಂಗೊಂಡಿದ್ದರೇ , ಕಾರು ನುಜ್ಜುಗುಜ್ಜಾಗಿದೆ. 

ಬಸ್​ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಮತ್ತು  ಕಾರು ತೀರ್ಥಹಳ್ಳಿ ಕಡೆಗೆ ಹೋಗುತ್ತಿತ್ತು. ಆಕ್ಸಿಡೆಂಟ್​ ಕಾರಣ ಯಾರು ಎಂಬುದು ಸ್ಪಷ್ಟವಾಗಿಲ್ಲ. ಅದೃಷ್ಟಕ್ಕೆ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಬಚಾವ್ ಆಗಿದ್ದಾರೆ. 

ಆದರೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಕಾರು ಜಖಂಗೊಂಡಿದ್ದರಿಂದ ಅದರಿಂದ ಹೊರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಸ್ತಳೀಯರು ಹಾಗೂ ಪ್ರಯಾಣಿಕರು ಹಗ್ಗ ಬಳಸಿ ಡೋರ್​ ಎಳೆದು ಕಾರಿನಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. 

ಸ್ಥಳಕ್ಕೆ ತೆರಳಿದ ಪೊಲೀಸರು  ರಸ್ತೆಯಿಂದ ಬಸ್ ಹಾಗೂ ಕಾರನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡರು.  


ಇನ್ನಷ್ಟು ಸುದ್ದಿಗಳು 

  1. BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

  2. ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್​ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?

  3. ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?