anandapura accident : ಕೋಳಿ ತುಂಬಿದ್ದ ಲಾರಿ ಪಲ್ಟಿ : ಬಿದ್ದಿದ್ದ ಕೋಳಿಯನ್ನು ಹೊತ್ತೊಯ್ದ ಸ್ಥಳೀಯರು
ಶಿವಮೊಗ್ಗ: ಇಂದು ಬೆಳಿಗ್ಗೆ ಹೊಸೂರು-ಆನಂದಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 206ರ ತಿರುವಿನಲ್ಲಿ ಕೋಳಿ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದೆ. ಪರಿಣಾಮ, ಸಾವಿರಾರು ಕೋಳಿಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಕಾರು ಅಡ್ಡ ಬಂದ ಕಾರಣ ಲಾರಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಹಲವಾರು ಕೋಳಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನೂ ಹಲವು ಕೋಳಿಗಳು ಜೀವಂತವಾಗಿದ್ದವು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಸ್ಥರು ತಂಡೋಪತಂಡವಾಗಿ ಆಗಮಿಸಿ, ರಸ್ತೆಯಲ್ಲಿ ಬಿದ್ದಿದ್ದ ಜೀವಂತ ಕೋಳಿಗಳನ್ನು ಉಚಿತವಾಗಿ ಮನೆಗಳಿಗೆ ಕೊಂಡೊಯ್ದರು.