Anandapura bus stand ಕೆಎಸ್ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ; ಇಬ್ಬರ ಬಂಧನ
ಸಾಗರ: ಸಾಗರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಆನಂದಪುರ ಪೊಲೀಸರು ಬಂಧಿಸಿದ್ದಾರೆ. ಘಟನೆ ಆನಂದಪುರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅನ್ನು ಚಾಲಕ ಮೋಹನ್ ಚಲಾಯಿಸುತ್ತಿದ್ದರು. ಈ ವೇಳೆ, ಪ್ರವೀಣ್ (31) ಮತ್ತು ಜಗದೀಶ್ (31) ಎಂಬ ಇಬ್ಬರು ಯುವಕರು ಬಸ್ ಓವರ್‌ಟೇಕ್ ಮಾಡಿದ್ದು ಏಕೆ ಎಂದು ಆನಂದಪುರ ಬಸ್ ನಿಲ್ದಾಣದಲ್ಲಿ ಬಸ್ ಅನ್ನು ತಡೆದಿದ್ದಾರೆ. ನಂತರ ಚಾಲಕ ಮೋಹನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಚಾಲಕ ಮೋಹನ್ ಅವರು ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರವೀಣ್ ಮತ್ತು ಜಗದೀಶ್ ಎಂಬುವವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
