SHIVAMOGGA NEWS TODAY

ಕೆಎಸ್ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ; ಇಬ್ಬರ ಬಂಧನ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Anandapura bus stand ಕೆಎಸ್ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ; ಇಬ್ಬರ ಬಂಧನ

ಸಾಗರ: ಸಾಗರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಆನಂದಪುರ ಪೊಲೀಸರು ಬಂಧಿಸಿದ್ದಾರೆ. ಘಟನೆ ಆನಂದಪುರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅನ್ನು ಚಾಲಕ ಮೋಹನ್ ಚಲಾಯಿಸುತ್ತಿದ್ದರು. ಈ ವೇಳೆ, ಪ್ರವೀಣ್ (31) ಮತ್ತು ಜಗದೀಶ್ (31) ಎಂಬ ಇಬ್ಬರು ಯುವಕರು ಬಸ್ ಓವರ್‌ಟೇಕ್ ಮಾಡಿದ್ದು ಏಕೆ ಎಂದು ಆನಂದಪುರ ಬಸ್ ನಿಲ್ದಾಣದಲ್ಲಿ ಬಸ್ ಅನ್ನು ತಡೆದಿದ್ದಾರೆ. ನಂತರ ಚಾಲಕ ಮೋಹನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಚಾಲಕ ಮೋಹನ್ ಅವರು ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರವೀಣ್ ಮತ್ತು ಜಗದೀಶ್ ಎಂಬುವವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

Anandapura bus stand
Anandapura bus stand

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.