Anandapura Crash ಆನಂದಪುರ: ಬೈಕ್ ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಿವಮೊಗ್ಗ : ತುಂಗಾ ಜಲಾಶಯದ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಇವತ್ತು ?
ಆಗಸ್ಟ್ 08ರಂದು ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಪೆಡ್ ವಾಹನ ಹಾಗೂ ಟಿಟಿ ಗಾಡಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ 112 ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಗಾಯಗೊಂಡ ಸವಾರನನ್ನು ತಮ್ಮ 112 ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
