ಸಾಗರ: ತೋಟದ ಮಧ್ಯೆ ಅಕ್ರಮವಾಗಿ ಬೆಳೆಯಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಗಿಡಗಳ ಮೇಲೆ ಆನಂದಪುರ ಪೊಲೀಸ್ ಠಾಣೆಯ ತಂಡವು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದೆ.
Anandapura Police ಘಟನೆಯ ವಿವರ
ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧಾರಿಸಿ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಒಳಗೊಂಡ ತಂಡವು ದಿನಾಂಕ ಆಗಸ್ಟ್ 14 ರಂದು ತಕ್ಷಣವೇ ಸ್ಥಳಕ್ಕೆ ತೆರಳಿ ದಾಳಿ ನಡೆಸಿದೆ.
ಗೌತಮಪುರ ಗ್ರಾಮದಲ್ಲಿ ಆರೋಪಿಗಳಾದ ಬಸವರಾಜ್ ಹಾಗೂ ಕುಮಾರ ಎಂಬುವವರು ತಮ್ಮ ತೋಟದ ಮಧ್ಯೆ ರಹಸ್ಯವಾಗಿ ಬೆಳೆದಿದ್ದ ಒಟ್ಟು 16 ಕೆಜಿ 400 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮಾರುಕಟ್ಟೆ ಮೌಲ್ಯ 2,10,000 ಎಂದು ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಗು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆಯನ್ನು ಮುಂದುವರಿಸಲಾಗಿದೆ.
