SHIVAMOGGA NEWS TODAY

ಮರ್ಮಾಂಗಕ್ಕೆ ಮರದ ಕೊಂಬೆ ತಗುಲಿ ವ್ಯಕ್ತಿ ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Anandapura ಆನಂದಪುರ: ಜಾನುವಾರುಗಳಿಗೆ ಮೇವು ತರಲು ಕಾಡಿಗೆ ಹೋಗಿದ್ದ ಯುವಕನೊಬ್ಬ ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಆನಂದಪುರ ಸಮೀಪದ ಉಳ್ಳೂರು ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಹೇಮಂತ್ (27) ಮೃತಪಟ್ಟ ದುರ್ದೈವಿ. 

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಫೆಬ್ರವರಿ 14ರ ಶನಿವಾರದಂದು ಹೇಮಂತ್ ಎಂದಿನಂತೆ ದನಕರುಗಳಿಗೆ ಮೇವು ಮತ್ತು ಸೊಪ್ಪು ತರಲು ಬಾಳೆಗುಂಡಿ ಕಾಡಿಗೆ ತೆರಳಿದ್ದರು. ಮರ ಹತ್ತಿ ಸೊಪ್ಪು ಕಡಿಯುತ್ತಿದ್ದ ಸಂದರ್ಭದಲ್ಲಿ ಕಡಿದ ಮರದ ರೆಂಬೆಯೊಂದು ಆಕಸ್ಮಿಕವಾಗಿ ಅವರ ಮರ್ಮಾಂಗಕ್ಕೆ ತಗುಲಿದೆ. ಏಟಿನ ರಭಸಕ್ಕೆ ಆಯತಪ್ಪಿದ ಹೇಮಂತ್ ಮರದಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. 

ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಇದನ್ನು ಗಮನಿಸಿ ತಕ್ಷಣ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. 

Anandapura Youth Dies After Falling Tree

Shivamogga Shivaratri Rules Swathantryada Ota Court Orders Walk-in Interview Shivamogga Court KFD Fatality Shivamogga Round up
shivamogga car decor sun control house
shivamogga car decor sun control house
END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.