anavatti news today 06-06-25 : ಹೆಚ್ಚು ಕುಡಿಬೇಡ ಎಂದ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

Soraba news : ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಆನವಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಜಡೆ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕತ್ತರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆನವಟ್ಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್​ಪಿ ಮಿಥುನ್ ಕುಮಾರ್ ಆನವಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಎಂಎಸ್​ಐಎಲ್​ ಮಳಿಗೆ ಮದ್ಯಪಾನ ಮಾಡಿದ ಬಳಿಕ ಊಟಕ್ಕೆ ಹೋದ ಸಂದರ್ಭದಲ್ಲಿ ಉಮೇಶ್  46 ವರ್ಷ ಹಾಗೂ ಈತನ ಅಳಿಯ ರವೀಂದ್ರ 26 ವರ್ಷ ನಡುವೆ ಜಗಳವಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು, ಉಮೇಶ್​ ರವೀಂದ್ರರವರಿಗೆ ಕತ್ತರಿಯಿಂದ ಇರಿದಿದ್ದ. ತೀವ್ರವಾಗಿ ಗಾಯಗೊಂಡ ಆತನನ್ನು ಮಂಗಳೂರು ವೆನ್​ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ .

anavatti news today 

ಇನ್ನೂ ಆನವಟ್ಟಿ ಪೊಲೀಸ್ ಮೂಲಗಳು ಹೇಳುವಂತೆ ರವಿಂದ್ರನಿಗೆ ಹೆಚ್ಚು ಕುಡಿಬೇಡ ಎಂದು ಹೇಳಿದ ವಿಚಾರಕ್ಕೆ ಉಮೇಶನ ಜೊತೆ ಜಗಳವಾಗಿದೆ. ಜಗಳ ತಾರಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.

 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು