ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ. ಸಿಕ್ಕಿದ್ದು ಎಷ್ಟು ಕೆಜಿ ಗಾಂಜಾ ಗೊತ್ತಾ?

ಹಂಚಿಕೊಳ್ಳಿ
WhatsApp Facebook X Telegram
Anavatti Police Arrest Man for Selling Ganja
Anavatti Police Arrest Man for Selling Ganja

ಆನವಟ್ಟಿ: ಜಿಲ್ಲೆಯಲ್ಲಿ ಗಾಂಜಾ ಹಾವಳಿಯನ್ನು ನಿಯಂತ್ರಸಲು ಪೊಲೀಸರು ಸತತ ಕಾರ್ಯಾಚರಣೆ ನಡೆಸುತ್ತಿದ್ದು, ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ರೋಹಿತ್ ಎಂದು ಗುರುತಿಸಲಾಗಿದ್ದು, ಈತನಿಂದ ಅಕ್ರಮ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. 

ಶಿವಮೊಗ್ಗ: ರೈಲ್ವೇ ಟಿಕೆಟ್​​ ಬುಕ್ಕಿಂಗ್​ ಕೌಂಟರ್ ಸೇರಿದಂತೆ ಹಲವೆಡೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ತಪಾಸಣೆ

ಮಾರ್ಚ್ 14ರ ಶನಿವಾರದಂದು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೊರವಲಯದಲ್ಲಿ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸ್ ತಂಡವು ಸ್ಥಳಕ್ಕೆ ದಾಳಿ ನಡೆಸಿ, ಮಾರಾಟ ಜಾಲದಲ್ಲಿ ತೊಡಗಿದ್ದ ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. 

ಆರೋಪಿತನಿಂದ ಸುಮಾರು 45 ಸಾವಿರ ರೂಪಾಯಿ ಮೌಲ್ಯದ 1 ಕೆ.ಜಿ. 132 ಗ್ರಾಂ ತೂಕದ ಗಾಂಜಾ, 550 ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿ ವಿರುದ್ಧ ಎನ್.ಡಿ.ಪಿ.ಎಸ್. (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇತರ ಆರೋಪಿಗಳ ಬಗ್ಗೆ ತನಿಖೆ ಮುಂದುವರೆದಿದೆ.

Anavatti Police Arrest Man for Selling Ganja

Anavatti Police Arrest Man for Selling Ganja
Anavatti Police Arrest Man for Selling Ganja
shivamogga car decor sun control house
shivamogga car decor sun control house

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor