ಸಿಂಗಲ್ ಕೇಸ್​ನ ಬೆನ್ನುಬಿದ್ದ ಪೊಲೀಸರಿಗೆ ಕಾದಿತ್ತು ಶಾಕ್! ಇಬ್ಬರು ಆರೋಪಿಗಳ ಬಳಿ ಸಿಕ್ಕಿದ್ದು 12 ಬೈಕ್! ಏನಿದು ಪ್ರಕರಣ

Anavatti police in Soraba taluk have arrested two bike thieves.ಸೊರಬ ತಾಲ್ಲೂಕು ಆನವಟ್ಟಿ ಪೊಲೀಸರು ಬೈಕ್ ಕಳ್ಳರಿಬ್ಬರನ್ನು ಅರೆಸ್ಟ್ ಮಾಡಿದ್ಧಾರೆ.

ಸಿಂಗಲ್ ಕೇಸ್​ನ ಬೆನ್ನುಬಿದ್ದ ಪೊಲೀಸರಿಗೆ ಕಾದಿತ್ತು ಶಾಕ್! ಇಬ್ಬರು ಆರೋಪಿಗಳ ಬಳಿ ಸಿಕ್ಕಿದ್ದು 12 ಬೈಕ್!  ಏನಿದು ಪ್ರಕರಣ

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS 

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು (soraba taluk)  ಪೊಲೀಸರು  ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.  

12 ಬೈಕ್ ಜಪ್ತಿ

ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್ ಸೇರಿದಂತೆ ಕಳುವಾದ ಒಟ್ಟು 12 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.  ಕಮನವಳ್ಳಿ ಗ್ರಾಮದ ಮಂಜುನಾಥ (25) ಹಾಗೂ ಹಿರೇಚೌಟಿ ಗ್ರಾಮದ ಸಿ.ಕೆ.ಅನಿಲ್ (22) ಬಂಧಿತರು. 

ಏನಿದು ಘಟನೆ

ಜಡೆ ಗ್ರಾಮದ ಸಂತೆ ಮೈದಾನದ ಬಳಿ ನಿಲ್ಲಿಸಿದ್ದ ಬೈಕ್‌ವೊಂದು ಕಳ್ಳತನವಾಗಿತ್ತು. ಈ ಸಂಬಂಧ ಬೈಕ್‌ನ ಮಾಲೀಕ ಚಂದ್ರ ಅವರು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.  ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಬೈಕ್ ಕಳ್ಳತನದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.  

ಆನವಟ್ಟಿ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಮತ್ತು ವಿಠಲ್ ಎಂ.ಅಗಾಸಿ ನೇತೃತ್ವದ ತಂಡ ಪ್ರಕರಣವನ್ನು ಬೇಧಿಸಿದೆ. ತಂಡದಲ್ಲಿ ಹೆಡ್ ಕಾನ್ಸ್‌ಟೇಬಲ್‌ಗಳಾದ ಗಿರೀಶ್, ಖಲಂದರ್, ಹರೀಶ್, ಕಾನ್‌ಸ್ಟೆಬಲ್‌ಗಳಾದ ಜಗದೀಶ್, ಮಂಜುನಾಥ್, ಮಲ್ಲೇಶ್, ಹರಿಪ್ರಸಾದ್, ಹನುಮಂತ, ಕೃಷ್ಣ, ಇಂದ್ರೇಶ್, ಗುರುರಾಜ್, ವಿಜಯ್ ಕುಮಾರ್ ಪಾಲ್ಗೊಂಡಿದ್ದರು.

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು