Anavatti Police Station ಕಳೆದು ಹೋಗಿದ್ದ ಲಕ್ಷಾಂತರ ಮೌಲ್ಯದ ಬಂಗಾರವನ್ನು ಒಂದೇ ವಾರದಲ್ಲಿ ಪತ್ತೆಹಚ್ಚಿದ ಪೊಲೀಸರು

Anavatti Police Station ಕಳೆದು ಹೋಗಿದ್ದ ಲಕ್ಷಾಂತರ ಮೌಲ್ಯದ ಬಂಗಾರವನ್ನು ಒಂದೇ ವಾರದಲ್ಲಿ ಪತ್ತೆಹಚ್ಚಿದ ಪೊಲೀಸರು

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಿಂದ ಕಳ್ಳತನವಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಪೊಲೀಸರು ಒಂದೇ ವಾರದಲ್ಲಿ ಪತ್ತೆಹಚ್ಚಿ, ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೆಹಬೂಬ ಷರೀಫ್, (27)  ಬಂಧಿತ ಆರೋಪಿಯಾಗಿದ್ದಾನೆ

ಏನಿದು ಪ್ರಕರಣ

ಜುಲೈ 25 ರಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮನೆಯೊಂದರಲ್ಲಿ  ಬಾಗಿಲು ಒಡೆದು ಬೀರುವುನಲ್ಲಿಟ್ಟಿದ್ದ  8,49,000 ರೂ ಮೌಲ್ಯದ ಬಂಗಾರದ ಮತ್ತು ಬೆಳ್ಳಿಯ ಆಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಹಿನ್ನೆಲೆ ಮನೆಯ ಮಾಲೀಕರು ಆನವಟ್ಟಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂಡ ರಚಿಸಿ ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದರು. ಇದೀಗ ಆರೋಪಿ ಪೊಲೀಸರು ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿದ್ದಾರೆ

ಹಾವೇರಿ ಜಿಲ್ಲೆಯ ಹಾನಗಲ್​ ತಾಲೂಕಿನ ಮೆಹಬೂಬ ಷರೀಫ್, (27)  ಬಂಧಿತ ಆರೋಪಿಯಾಗಿದ್ದು, ಆತನಿಂದ 8,49,000/- ರೂ ಮೌಲ್ಯದ 135 ಗ್ರಾಂ ಚಿನ್ನದ ಮತ್ತು 200 ಗ್ರಾಂ ಬೆಳ್ಳಿಯ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

Anavatti Police Station
Anavatti Police Station

Leave a Comment