ಶಿವಮೊಗ್ಗ ಜಿಲ್ಲಾ ಪೊಲೀಸ್  ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿರುವ  ಅನಿಲ್ ಕುಮಾರ್ ಭೂಮರಡ್ಡಿಯವರಿಗೆ ಅತ್ಯುನ್ನತ ಪ್ರಶಸ್ತಿ

Malenadu Today

SHIVAMOGGA  |  Jan 25, 2024  | additional commissioner of police in Shivamogga district police department, ಶಿವಮೊಗ್ಗ ಜಿಲ್ಲಾ ಪೊಲೀಸ್  ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿರುವ  ಅನಿಲ್ ಕುಮಾರ್ ಭೂಮರಡ್ಡಿಯವರಿಗೆ ಗಣರಾಜ್ಯೋತ್ಸವ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. 

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರಿಗೆ 2024ನೇ ಸಾಲಿನ  ಗಣರಜ್ಯೋತ್ಸವ ನಿಮಿತ್ತ ನೀಡಲಾಗುವ ಮಾನ್ಯ ರಾಷ್ಟ್ರಪತಿಗಳ ಪೊಲೀಸ್ ಶ್ಲಾಂಘನೀಯ ಸೇವಾ ಪದಕ ಲಭಿಸಿದೆ. 

ಇವರು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ ಈ ಪ್ರಶಸ್ತಿ ಲಭಿಸಿದೆ.  ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು 1994ನೇ ಸಾಲಿನಲ್ಲಿ  ಪೊಲೀಸ್ ಉಪ ನೀರೀಕ್ಷಕರಾಗಿ ಪೊಲೀಸ್ ಇಲಾಖೆಗೆ ಸೇವೆಗೆ ಸೇರಿದ್ದರು. 

ನಂತರ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಹಲವು ಕಡೆಗಳಲ್ಲಿ ಸೇವೆಸಲ್ಲಿಸಿದ್ಧಾರೆ. ಇನ್ನೂ ಇವರಿಗೆ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ  ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ರವರು ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ,  ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.


Share This Article