ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 24 2025 : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಸುಗಳ್ಳತನ ಹೆಚ್ಚಾಗಿದ್ದು ಈ ಸಂಬಂಧ ಈಗಾಗಲೇ ಹಲವು ಪ್ರತಿಭಟನೆಗಳು ನಡೆದಿವೆ. ಇದರ ನಡುವೆ ಕಾನೂನು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಿಗೆ ಬಿಜೆಪಿ ಯುವ ಮೋರ್ಚಾ ತೀರ್ಥಹಳ್ಳಿ ಮಂಡಲದ ಸದಸ್ಯರು ಮನವಿ ಸಲ್ಲಿಸಿದ್ದಾರೆ.
ಮನವಿಯಲ್ಲಿ ತೀರ್ಥಹಳ್ಳಿಯಲ್ಲಿ ಜಾನುವಾರು ಸಾಗಣೆ ಮತ್ತು ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾಕಷ್ಟು ಬಾರಿ ಪೊಲೀಸ್ ಇಲಾಖೆಗೆ ದೂರು ನೀಡಿದರೂ ಗೋಕಳ್ಳತನ ಕಡಿಮೆಯಾಗಿಲ್ಲ. ಈ ಗೋಕಳ್ಳರ ಜೊತೆ ತೀರ್ಥಹಳ್ಳಿ ಸರ್ಕಾರಿ ಅಧಿಕಾರಿಗಳು ಶಾಮೀಲಾಗಿದ್ದಾರೆ .ಅಕ್ರಮವಾಗಿ ಜಾನುವಾರು ಸಾಗಿಸುವವರಿಗೆ ಇವರು ಸುಳ್ಳು ಅನುಮತಿ ಪತ್ರಗಳನ್ನು ನೀಡಿ ಸಹಕರಿಸುತ್ತಿದ್ದಾರೆ ಎಂದು ತೀರ್ಥಹಳ್ಳಿ ಬಿಜೆಪಿ ಯುವ ಮೋರ್ಚಾ ಗಂಭೀರ ಆರೋಪ ಮಾಡಿದೆ. ಹೀಗೆ ಅಕ್ರಮವಾಗಿ ಗೋ ಸಾಗಣೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿದೆ. ಇನ್ನು ಮುಂದೆ ಜಾನುವಾರು ಕಳ್ಳತನ ಅಥವಾ ಅಕ್ರಮ ಸಾಗಣೆ ಕಂಡುಬಂದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಪಶುಸಂಗೋಪನಾ ಇಲಾಖೆಯಿಂದ ಸೂಚನೆ: ಜಾನುವಾರು ಸಾಗಣೆಗೆ ನಿಯಮ ಕಡ್ಡಾಯ
ಇನ್ನೂ ಜಾನುವಾರು ಸಾಗಣೆ ವೇಳೆ ಕಡ್ಡಾಯವಾಗಿ ದಾಖಲಾತಿಗಳನ್ನು ಕೊಟ್ಟು ಅನುಪತಿ ಪತ್ರ ಪಡಯಬೇಕು ಎಂಬ ನಿಯಮವಿದೆ. ಈ ನಿಟ್ಟಿನಲ್ಲಿ ಕಡ್ಡಾಯವಾಗಿ ನಿಯಮ ಪಾಲಿಸುವಂತೆ ಪೊಲೀಸ್ ಇಲಾಖೆ ಸಹ ಪಶುಸಂಗೋಪನಾ ಇಲಾಖೆಗೆ ಪತ್ರ ಬರೆದಿತ್ತು. ಹೀಗಿದ್ದರೂ ತೀರ್ಥಹಳ್ಳಿಯಲ್ಲಿ ಗೋಮಾಂಸಕ್ಕಾಗಿ ಜಾನುವಾರ ಸಾಗಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಪ್ರತಿಭಟನೆ ನಡೆಸಿತ್ತು . ಇದೀಗ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಮನವಿ ಸಲ್ಲಿಸಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Animal Smuggling BJP Yuva Morcha Demands Action