ಬೆ,11 ರಿಂದ ಸಂಜೆ 4 ರ ವರೆಗೆ ಅಂಜನಾಂದ್ರಿ ಬೆಟ್ಟಕ್ಕೆ ಪ್ರವೇಶವಿಲ್ಲ, ಕಾರಣವೇನು 

ಕೊಪ್ಪಳ : ಬೇಸಿಗೆಯ ಪ್ರಖರ ಬಿಸಿಲು ಮತ್ತು ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಅಂಜನಾದ್ರಿ ಬೆಟ್ಟ ಏರಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ನಿರ್ಬಂಧ ಹೇರಿದೆ. ಪ್ರವಾಸಿಗರು ಮತ್ತು ಭಕ್ತರ ಆರೋಗ್ಯದ ದೃಷ್ಟಿಯಿಂದ ಪ್ರತಿದಿನ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಟ್ಟ ಏರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ. 

ಇವತ್ತು ಶಿವಮೊಗ್ಗದಲ್ಲಿ ಏನೆಲ್ಲಾ ನಡೆಯಿತು ಇ-ಪೇಪರ್​ ಓದಿ

ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದಲ್ಲಿರುವ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರಿಗೆ ಈಗ ನಿಗದಿತ ಸಮಯದಲ್ಲಿ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ಹೊಸ ವೇಳಾಪಟ್ಟಿಯಂತೆ ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ ಮತ್ತು ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಮಾತ್ರ ಆಂಜನೇಯ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ. ಉರಿಬಿಸಿಲಿನಲ್ಲಿ ಬೆಟ್ಟದ ಮೆಟ್ಟಿಲುಗಳನ್ನು ಏರುವುದರಿಂದ ಭಕ್ತರು ಅಸ್ವಸ್ಥರಾಗುತ್ತಿರುವುದನ್ನು ಗಮನಿಸಿ ಈ ಕ್ರಮ ಕೈಗೊಳ್ಳಲಾಗಿದೆ. 

ಕಳೆದ ಎರಡು ತಿಂಗಳ ಅವಧಿಯಲ್ಲಿ ಬೆಟ್ಟ ಏರಿದ ಇಬ್ಬರು ಭಕ್ತರು ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿರುವ ಘಟನೆ ಜಿಲ್ಲಾಡಳಿತವನ್ನು ಎಚ್ಚರಿಸಿದೆ. ಮೆಟ್ಟಿಲುಗಳನ್ನು ಏರುವಾಗ ಉಂಟಾಗುವ ಆಯಾಸ ಮತ್ತು ಬಿಸಿಲಿನ ಬೇಗೆಯಿಂದಾಗಿ ಹೃದಯಾಘಾತ ಅಥವಾ ಉಸಿರಾಟದ ತೊಂದರೆ ಸಂಭವಿಸುವ ಸಾಧ್ಯತೆ ಇರುವುದರಿಂದ, ಭಕ್ತರ ಪ್ರಾಣರಕ್ಷಣೆಗಾಗಿ ಈ ಸಮಯ ಬದಲಾವಣೆ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೊಪ್ಪಳ ಜಿಲ್ಲೆಯಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅಂಜನಾದ್ರಿಗೆ ಬರುವ ಸಾವಿರಾರು ಭಕ್ತರು ಈ ನಿಯಮವನ್ನು ಪಾಲಿಸಬೇಕೆಂದು ವಿನಂತಿಸಲಾಗಿದೆ.

Anjanadri Hill Timings Changed
Anjanadri Hill Timings Changed

Anjanadri Hill Timings Changed

shivamogga car decor sun control house
shivamogga car decor sun control house