ಓದಲು ಫಾರಿನ್​ಗೆ ಹೋಗ್ತೀರಾ!? ದೇಗುಲ ಸಮಿತಗೆ ಸೇರುತ್ತೀರಾ? ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ತೀರಾ? ಈ ಸುದ್ದಿ ನಿಮಗಾಗಿ!  

prathapa thirthahalli
Prathapa thirthahalli - content producer

Announcements ಶಿವಮೊಗ್ಗ, malenadu today news : ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತ ವಿವಿಧ ಸರ್ಕಾರಿ ಇಲಾಖೆಯು ನೀಡಿರುವ ಉಪಯುಕ್ತ ಪ್ರಕಟಣೆಗಳ ವಿವರಗಳನ್ನು ಗಮನಿಸುವುದಾದರೆ,  ಕೆವಿಟಿಎಸ್‌ಡಿಸಿ ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಆ.17 ರ ಭಾನವಾರದಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮವನ್ನು ಬೆಂಗಳೂರಿನ ದಿ ಲಲಿತ್ ಅಶೋಕ ಹೋಟೆಲ್‌ನಲ್ಲಿ ಆಯೋಜಿಸಿದೆ.

ಈ ಕಾರ್ಯಕ್ರಮದಲ್ಲಿ 10 ಕ್ಕೂ ಹೆಚ್ಚು ವಿದೇಶಗಳ 60 ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿದ್ದು ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿರ್ದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸುವ ಅವಕಾಶ ಕಲ್ಪಿಸಲಾಗುತ್ತಿದೆ.

- Advertisement -

ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://studyroad.ksdckarnataka.com ಮೂಲಕ ನೋಂದಾಯಿಸಿಕೊಂಡು ಮಾಹಿತಿ ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ: 7338674791, 7338674794, 7338674798, 7338674792 ನ್ನು ಸಂಪರ್ಕಿಸಬಹುದೆದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಹೆಚ್ ಎಂ ಸುರೇಶ್ ತಿಳಿಸಿದ್ದಾರೆ.

ಮಾಜಿ ಸೈನಿಕರುಗಳಿಂದ ವಿವಿಧ ಕೋರ್ಸಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಡೈರೆಕ್ಟೊರೇಟ್ ಜನರಲ್ ರಿಸೆಟ್ಲ್ಮೆಂಟ್ ಇವರಿಂದ ಸೇನಾ ಪಡೆಯ ನಿವೃತ್ತ ಅಧಿಕಾರಿಗಳು ಮತ್ತು ಮಾಜಿ ಸೈನಿಕರುಗಳಿಗೆ(ಜೆಸಿಒ/ಇತರೆ ರ‍್ಯಾಂಕ್) ವಿವಿಧ ಸರ್ಟಿಫಿಕೇಟ್ ಕೋರ್ಸ್ಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಅರ್ಜಿದಾರರು 60 ವರ್ಷ ಒಳಗಿನವರಾಗಿರಬೇಕು. ನಿವೃತ್ತಿಯಾಗಿ ಮೂರು ವರ್ಷ ಮೀರಿರದ ನಿವೃತ್ತ ಅಧಿಕಾರಿಗಳು ಹಾಗೂ ಐದು ವರ್ಷ ಮೀರಿರದ ಮಾಜಿ ಸೈನಿಕರುಗಳಿಗೆ ಸರ್ಟಿಫಿಕೇಟ್ ಕೋರ್ಸಗಳಿಗೆ ಸೇರಲು ಅವಕಾಶವಿರುತ್ತದೆ. ನಿವೃತ್ತ ಅಧಿಕಾರಿಗಳಿಗೆ ಶೇಕಡ 60 ರಷ್ಟು ಶುಲ್ಕ ವಿನಾಯಿತಿಯಿದೆ. ಹಾಗೂ ಮಾಜಿ ಸೈನಿಕರುಗಳಿಗೆ(ಜೆಸಿಒ/ಇತರೆ ರ‍್ಯಾಂಕ್) ಯಾವುದೇ ಶುಲ್ಕವಿರುವುದಿಲ್ಲ. 

ಈ ಅರ್ಹತೆಯನ್ನು ಹೊಂದಿರುವ ಮಾಜಿ ಸೇನಾ ಪಡೆಯ ಅಧಿಕಾರಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ಇಲ್ಲಿ ನೋಂದಣಿಯನ್ನು ಮಾಡಿಕೊಳ್ಳಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ(ಪ್ರ) ಡಾ.ಸಿ.ಎ. ಹಿರೇಮಠ ತಿಳಿಸಿದ್ದಾರೆ.

Announcements ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ತಾಲ್ಲೂಕು ಮಟ್ಟದಲ್ಲಿ ವಿವಿಧ ಸ್ಪರ್ಧೆಗಳು 

ಶಿವಮೊಗ್ಗ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಇವರ ಸಂಯುಕ್ತಾಶ್ರಯದಲ್ಲಿ ಆ.16 ರ ಬೆಳಿಗ್ಗೆ 10 ಗಂಟೆಗೆ ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ನಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ರಸಪ್ರಶ್ನೆ, ಪ್ರಬಂಧ, ಕವನ ವಾಚನ ಮತ್ತು ಚಿತ್ರಕಲಾ ಸ್ಫರ್ಧೆಗಳನ್ನು ಏರ್ಪಡಿಸಲಾಗಿದೆ. 

Announcements ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್, ಸಾಗರ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. 

ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾ ಮತ್ತು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು, ರಾಷ್ಟ್ರೀಯ ಶಿಕ್ಷಣ ಕಾರ್ಯದರ್ಶಿ, ತಹಸೀಲ್ದಾರ್, ಶಿವಮೊಗ್ಗ ತಾಲ್ಲೂಕು ಇಓ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಧಿಕಾರಿ, ಕಸ್ತೂರಿ ಬಾಲಿಕ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಪ್ರಾಂಶುಪಾಲರು, ಅಧಿಕಾರಿಗಳು, ತಾಲ್ಲೂಕಿನ ಎಲ್ಲ ಸಂಘ ಸಂಸ್ಥೆಗಳ ಅಧ್ಯಕ್ಷರು ಪಾಲ್ಗೊಳ್ಳುವರು.

Announcements ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಜಿಲ್ಲೆಯ “ಬಿ” ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ರಚಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.12 ರಂದು ಕೊನೆಯ ದಿನವಾಗಿದ್ದು, ಎಲ್ಲಾ ತಾಲ್ಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ತಾಲ್ಲೂಕು ಕಚೇರಿಗೆ ಸಲ್ಲಿಸಬಹುದು. ಅರ್ಜಿದಾರನಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗಧಿತ ನಮೂನೆ-1 (ಬಿ) (22 ನೇ ನಿಯಮ) ರಲ್ಲಿ ಭರ್ತಿ ಮಾಡಬೇಕು. 

Announcements ನಿಗದಿಪಡಿಸಿದ ದಿನಾಂಕದ ನಂತರ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

car decor

 

Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *