MALENADUTODAY.COM | SHIVAMOGGA NEWS
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತೊಂದು ಸಾಧನೆ ಮೆರೆದಿದ್ದಾರೆ. ಕ್ಲಿಷ್ಟಕರವಾದದ ಶಸ್ತ್ರಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿಯು ವ್ಯವಸ್ಥಿತವಾಗಿ ನಡೆಸಿದ, ಜೀವವೊಂದನ್ನ ಉಳಿಸಬಹುದು ಎಂದು ತೋರಿಸಿಕೊಟ್ಟಿದ್ದಾರೆ.
ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮಹಿಳೆಯ ಹೊಟ್ಟೆಯಲ್ಲಿದ್ದ ದೊಡ್ಡ ಗಾತ್ರದ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಜೆ ಸಿ ಆಸ್ಪತ್ರೆಯ ಪ್ರಸೂತಿ ತಜ್ಞ ವೈದ್ಯಾಧಿಕಾರಿ ಡಾ. ಅರವಿಂದ್ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿಯ ಗ್ರಾಮೀಣ ಭಾಗದ ಗರ್ಭಿಣಿಯೊಬ್ಬರು ತಪಾಸಣೆಗೆ ಬಂದಾಗ, ಅವರ ಹೊಟ್ಟೆಯಲ್ಲಿ ಗೆಡ್ಡೆ ಇರುವುದು ಗೊತ್ತಾಗಿತ್ತು.
ತಕ್ಷಣವೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ ವೈದ್ಯರು ಗಡ್ಡೆಯನ್ನು ಆಪರೇಷನ್ ಮೂಲಕ ತೆಗೆದಿದ್ದಾರೆ, ಹೆರಿಗೆ ಸಂದರ್ಭದಲ್ಲಿ ಇಂತಹ ಆಪರೇಷನ್ ಕ್ಲಿಷ್ಟಕರವಾದುದ್ದು. ಈ ನಿಟ್ಟಿನಲ್ಲಿ ಸಾಕಷ್ಟು ಎಚ್ಚರಿಕೆಯ ಮೂಲಕ ಡಾ.ಅರವಿಂದ್ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
